LATEST NEWS
ಉಡುಪಿ ಜಿಲ್ಲೆಯಲ್ಲೂ ಶಾಂತಿಯುತ ಮತದಾನ, ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸಿದ ಹೆಗ್ಡೆ, ಪೂಜಾರಿ, ಮಠಾಧೀಪತಿಗಳು..!
ಉಡುಪಿ : ಭಾರಿ ಜಿದ್ದಾಜಿದ್ದಿನ ಕ್ಷೇತ್ರವಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೂ ಶಾಂತಿಯುತ ಮತದಾನ ನಡೆದಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಮತ ಕ್ಷೇತ್ರವಾದ ಕೋಟತಟ್ಟು ಗ್ರಾಮ ಪಂಚಾಯತ್ ನ ಮತಗಟ್ಟೆ ಸಂಖ್ಯೆ 165 ರಲ್ಲಿ ಮತದಾನ ಮಾಡಿದರು.
ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಕೋಟ ಶ್ರೀನಿವಾಸ ಪೂಜಾರಿ, ಪತ್ನಿ ಶಾಂತ ಹಾಗೂ ಪುತ್ರಿ ಶೃತಿ ಅವರೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಕ್ಷೇತ್ರದ ಜನತೆ ರಾಷ್ಟ್ರೀಯ ಐಕ್ಯತೆ ಮತ್ತು ಭದ್ರತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ ಆ ನಿಟ್ಟಿನಲ್ಲಿ ಅತ್ಯಂತ ಅಧಿಕ ಸಂಖ್ಯೆಯಲ್ಲಿ ಮತದಾರರು ನನ್ನ ಕೈ ಹಿಡಿಯುತ್ತಾರೆ ಎನ್ನುವ ಭರವಸೆ ಇದೆ ಎಂದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ತಮ್ಮ ಸ್ವಗೃಹದ ಸಮೀಪದ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರ ಮತಗಟ್ಟೆ ಸಂಖ್ಯೆ 97ರಲ್ಲಿ ಮತದಾನ ಮಾಡಿದರು.
ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಕೆ. ಜಯಪ್ರಕಾಶ್ ಹೆಗ್ಡೆಯವರು ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ಜೊತೆಗೆ ಬಂದು ಮತದಾನ ಮಾಡಿದರು. ಈ ಸಂದರ್ಭ ಅವರು ಈ ಬಾರಿ ಉತ್ತಮ ವಾತಾವರಣವಿದ್ದು, ಮತದಾರರು ಕ್ಷೇತ್ರದಿಂದಡೆ ಬೆಂಬಲ ವ್ಯಕ್ತಪಡಿಸಿರುವುದು ಸಂತೋಷದೊಂದಿಗೆ ಅಲ್ಲದೆ ಈ ಚುನಾವಣೆಯಲ್ಲಿ ನಾನು ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು.
ಉಡುಪಿ ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶ ತೀರ್ಥ, ಕಿರಿಯ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಶ್ರೀ ಈಶ ಪ್ರೀಯ ತೀರ್ಥ ಸ್ವಾಮೀಜಿ ಪಿ ನಗರದ ನಾರ್ತ್ ಸರಕಾರಿ ಶಾಲೆಯಲ್ಲಿನ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ತಮ್ಮ ಬೂತ್ ಸಂಖ್ಯೆ 140 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಾಂಬಡಿ ಪದವು ನಲ್ಲಿ ಪತ್ನಿ ಜತೆ ಆಗಮಿಸಿ ಮತದಾನ ಮಾಡಿದರು.