ಡಿಸೆಂಬರ್ 27 ರ ಪೇಜಾವರ ಶ್ರೀಗಳ ಗುರುವಂದನಾ ಮುಂದಕ್ಕೆ

ಉಡುಪಿ ಡಿಸೆಂಬರ್ 25: ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಸನ್ಯಾಸ ಸ್ವೀಕರಿಸಿ 80 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಅವರು ಡಿಸೆಂಬರ್ 27 ರಂದು ಉಡುಪಿಯಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ರದ್ದಾಗಿದೆ.

ಪೇಜಾವರ ಶ್ರೀಗಳು ಸನ್ಯಾಸ ಸ್ವೀಕರಿಸಿ 80 ವರ್ಷ ಸಂದ ಹಿನ್ನಲೆಯಲ್ಲಿ ಈ ಕಾರ್ಯಕ್ರಮವನ್ನು ಪೇಜಾವರ ಶ್ರೀಗಳ ಶಿಷ್ಯೆ ಕೇಂದ್ರ ಸಚಿವೆ ಉಮಾಭಾರತಿ ಗುರುವಂದನಾ ಕಾರ್ಯಕ್ರಮ ಡಿಸೆಂಬರ್ 27 ರಂದು ಉಡುಪಿಯಲ್ಲಿ ಹಮ್ಮಿಕೊಂಡಿದ್ದರು.

ಈ ಗುರುವಂದನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾಗವಹಿಸಲಿದ್ದರು. ಆದರೆ ರಾಷ್ಟ್ರಪತಿಗಳ ಶಿಷ್ಟಾಚಾರ ಪ್ರಕಾರ ಸನ್ಮಾನ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿ ಪಾಲ್ಗೊಳ್ಳಲು ಸಾಧ್ಯವಾಗದಿರುವುದು ಹಾಗೂ ಭದ್ರತಾ ಕಾರಣಗಳಿಂದಾಗಿ ಗುರುವಂದನೆ ಸಾರ್ವಜನಿಕ ಕಾರ್ಯಕ್ರಮ ಮುಂದಕ್ಕೆ ಹಾಕಲಾಗಿದೆ.

ಆದರೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಉಡುಪಿಗೆ ಭೇಟಿ ನೀಡಲಿದ್ದು ಡಿಸೆಂಬರ್ 27 ರ ಬೆಳಿಗ್ಗೆ 11.35ಕ್ಕೆ ಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ನಂತರ ಪೇಜಾವರ ಶ್ರೀ ಹಾಗೂ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರನ್ನು ಭೇಟಿ ಮಾಡಲಿದ್ದಾರೆ. ನಂತರ 12.45ಕ್ಕೆ ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮಿಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿ ನಿರ್ಗಮಿಸಲಿದ್ದಾರೆ.

ರಾಷ್ಟ್ರಪತಿಗಳ ಜೊತೆ ಕೇಂದ್ರ ಸಚಿವೆ ಉಮಾ ಭಾರತಿ ಹಾಗೂ ನಾಗಲ್ಯಾಂಡ್ ಗವರ್ನರ್ ಪದ್ಮನಾಭ ಆಚಾರ್ಯ ಅವರು ಉಪಸ್ಥಿತರಿರುವರು.

ರಾಷ್ಟ್ರಪತಿಗಳ ಭೇಟಿ ಹಿನ್ನಲೆಯಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ಪೇಜಾವರ ಮಠ , ರಥ ಬೀದಿಗೆ ಪ್ರವೇಶ ನಿರ್ಭಂಧಿಸಲಾಗಿದೆ.

2 Shares

Facebook Comments

comments