LATEST NEWS
ಮತ್ತೆ ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು
ಮತ್ತೆ ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು
ಉಡುಪಿ ಅಕ್ಟೋಬರ್ 25: ಆರೋಗ್ಯ ತಪಾಸಣೆಗಾಗಿ ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸ್ವಾಮಿಜಿಯವರು ಹರ್ನಿಯಾ ಆಪರೇಷನ್ ಮಾಡಿಸಿಕೊಂಡಿದ್ದರು.
ಇದೀಗ ಆರೋಗ್ಯ ತಪಾಸಣೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಶ್ರೀಗಳು ನಿತ್ಯ ಪೂಜೆಯನ್ನು ಮುಗಿಸಿ ಆಸ್ಪತ್ರೆಗೆ ದಾಖಲಾಗಿದ್ದು , ಪೇಜಾವರ ಶ್ರೀಗಳಿಗೆ ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಎರಡು ದಿನ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಇರುವ ಸಾಧ್ಯತೆ ಇದೆ.
ಪೇಜಾವರ ಶ್ರೀಗಳು ಆರೋಗ್ಯವಾಗಿದ್ದು ಯಾವುದೇ ಆತಂಕ ಬೇಡ ಎಂದು ಪೇಜಾವರ ಮಠದ ಅಧಿಕಾರಿಗಳು ತಿಳಿಸಿದ್ದಾರೆ.
You must be logged in to post a comment Login