LATEST NEWS
ಸುಬ್ರಹ್ಮಣ್ಯ ಮಠಾಧೀಶರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಕಿರುಕುಳ – ಪೇಜಾವರ ಶ್ರೀ
ಸುಬ್ರಹ್ಮಣ್ಯ ಮಠಾಧೀಶರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಕಿರುಕುಳ – ಪೇಜಾವರ ಶ್ರೀ
ಉಡುಪಿ ಅಕ್ಟೋಬರ್ 14: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಯಿಂದ ಹಾಗೂ ಸುಬ್ರಹ್ಮಣ್ಯ ಮಠಕ್ಕೆ ಸಮಸ್ಯೆಯಾಗುತ್ತಿದ್ದು, ಸುಬ್ರಹ್ಮಣ್ಯ ಮಠಾಧೀಶರಿಗೆ ದೇವಸ್ಥಾನದ ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ಪೇಜಾವರ ಶ್ರೀಗಳು ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸುಬ್ರಹ್ಮಣ್ಯ ಮಠದ ನಡುವೆ ನಡೆಯುತ್ತಿರುವ ವಿವಾದಿಂದಾಗಿ ಉಡುಪಿಯ ಅಷ್ಟಮಠಾಧೀಶರಿಗೆ ಈ ಬಗ್ಗೆ ಅತೀವ ಕಳವಳವಾಗಿದೆ, ದೇವಸ್ಥಾನದವರು ಮಠಕ್ಕೆ ಅನಾವಶ್ಯಕ ತೊಂದರೆ ಕೊಡಬಾರದು ಎಂದು ಹೇಳಿದ ಅವರು ಮಠದ ಗೋಶಾಲೆಗೆ ದೇವಳ ನೀರನ್ನು ದೇವಸ್ಥಾನ ಸ್ಥಗಿತಗೊಳಿಸಿದೆ.
ಅಲ್ಲದೆ ಸರ್ಪ ಸಂಸ್ಕಾರಕ್ಕೆ ಎಲ್ಲೂ ನಿರ್ಬಂಧ ಇಲ್ಲ ಆದರೂ ಮಠದ ವಿರೋಧಿ ವರ್ಗದ ಈ ನಿಲುವು ಸರಿಯಲ್ಲ ಎಂದು ಹೇಳಿದ ಅವರು ಈ ನಿಲುವಿನಿಂದ ಸಮಾಜಕ್ಕೆ ತೊಂದರೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಮಠ ಜನರಿಗೆ ಹಾನಿಕಾರಕವಾಗಿ ವರ್ತಿಸುತ್ತಿಲ್ಲ ಈ ಹಿನ್ನಲೆಯಲ್ಲಿ ಕುಕ್ಕೆ ದೇವಸ್ಥಾನ -ಮಠದ ಸಂಘರ್ಷ ಸರಿಯಲ್ಲ ಎಂದರು.
ಸರಕಾರದ ಮಧ್ಯಪ್ರವೇಶದಿಂದಾಗಿ ಈ ರೀತಿಯ ಸಮಸ್ಯೆಗಳು ಬರಲಾರಂಭಿಸಿದ್ದು, ಮಠ, ದೇವಸ್ಥಾನ ಸ್ವತಂತ್ರವಾಗಿ ನಡೆಯಬೇಕು ಇದಕ್ಕೆ ಎಲ್ಲಾ ಪಕ್ಷ, ಎಲ್ಲಾ ಜನರ ಸಹಕಾರ ಬೇಕು ಎಂದು ತಿಳಿಸಿದರು.
ದೇವಸ್ಥಾನ ಹಾಗೂ ಮಠದ ನಡುವೆ ಇರುವ ವಿವಾದ ಬಗೆ ಹರಿಸಲು ದೇವಸ್ಥಾನದ ಆಡಳಿತ ಮಂಡಳಿ ಸಹಕರಿಸಬೇಕು ಎಂದು ಹೇಳಿದ ಪೇಜಾವರ ಶ್ರೀಗಳು ಉಪವಾಸ ಕೈಬಿಡುವಂತೆ ಸ್ವಾಮಿಗಳ ಮನ ಒಲಿಸಬೇಕು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪಲಿಮಾರು ಶ್ರೀ, ಕಾಣಿಯೂರು ಶ್ರೀ, ಸೋದೆ ಸ್ವಾಮೀಜಿ ಭಾಗಿಯಾಗಿದ್ದರು.