LATEST NEWS
ಅಯೋಧ್ಯೆ ತೀರ್ಪಿನ ಹಿನ್ನಲೆ ಶಾಂತಿ ಕಾಪಾಡಲು ಪೇಜಾವರ ಶ್ರೀ ಕರೆ
ಅಯೋಧ್ಯೆ ತೀರ್ಪಿನ ಹಿನ್ನಲೆ ಶಾಂತಿ ಕಾಪಾಡಲು ಪೇಜಾವರ ಶ್ರೀ ಕರೆ
ಉಡುಪಿ ನವೆಂಬರ್ 7: ಬಹು ನಿರೀಕ್ಷಿತ ಅಯೋಧ್ಯೆಯ ತೀರ್ಪು ಶೀಘ್ರ ಹೊರಬರಲಿದ್ದು, ಕರ್ನಾಟಕ ಹಾಗೂ ಕರಾವಳಿಯ ಜನ ತೀರ್ಪನ್ನು ಸಮಾನವಾಗಿ ಸ್ವೀಕರಿಸಬೇಕು, ಒಂದು ವೇಳೆ ಹಿಂಸೆಯಾದರೆ ನಾನು ಉಪವಾಸ ಮಾಡುತ್ತೆನೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಇದೇ ತಿಂಗಳ 17ರ ಒಳಗೆ ಅಯೋಧ್ಯೆ ರಾಮಜನ್ಮಭೂಮಿ ಕುರಿತಂತೆ ತೀರ್ಪು ನೀಡಲಿದ್ದು, ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಹಾಗೂ ಬೀದಿಗಿಳಿದು ಮೆರವಣಿಗೆ ಮಾಡಬಾರದು ಹಾಗೂ ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು ಎಂದು ವಿಹಿಂಪ ಈಗಾಗಲೇ ಹೇಳಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದರು.
ಮುಸಲ್ಮಾನ ಬಾಂಧವರೂ ಕೂಡಾ ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು. ಪರ ಅಥವಾ ವಿರುದ್ಧ ತೀರ್ಪು ಬಂದರೆ ಅತಿರೇಕದ ವರ್ತನೆ ಬೇಡ. ಹಿಂದೂಗಳು- ಮುಸಲ್ಮಾನರು ಸಮಾನವಾಗಿ ತೀರ್ಪನ್ನು ಸ್ವೀಕರಿಸಿ ಎಂದರು. ತೀರ್ಪು ಅನುಕೂಲವಾಗಿ ಬರುತ್ತದೆ ಎಂದು ಭಾವಿಸಿದ್ದೇವೆ. ಸಂವಿಧಾನ, ಸುಪ್ರೀಂ ಕೋರ್ಟ್ ಗೆ ದೇಶದ ಜನ ಗೌರವ ಕೊಡಬೇಕು. ಸಂಘರ್ಷ ಪ್ರತಿಭಟನೆಗೆ ಯಾರೂ ಅವಕಾಶ ಮಾಡಿಕೊಡಬಾರದು. ಈಗಾಗಲೇ ರವಿಶಂಕರ್ ಗುರೂಜಿ ಕೂಡಾ ಶಾಂತಿ ಕಾಪಾಡಲು ಕರೆ ಕೊಟ್ಟಿದ್ದಾರೆ. ಮಂದಿರ ವಿಚಾರದಲ್ಲಿ ಅಂತರಂಗದ ಸಂಧಾನ ಆಗಿದೆ ಎಂಬ ಮಾಹಿತಿಯಿದೆ ಉಡುಪಿಯಲ್ಲಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.