LATEST NEWS
ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ಕೆಲವು ರಾಜಕಾರಣಿಗಳಿಗೆ ಮಾತ್ರವೇ? – ಪೇಜಾವರ ಶ್ರೀ
ಮಂಗಳೂರು ಅಕ್ಟೋಬರ್ 28: ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡ ಬಿಕೆ ಹರಿಪ್ರಸಾದ್ ಅವರಿಗೆ ಪೇಜಾವರ ಶ್ರೀಗಳು ತಿರುಗೇಟು ನೀಡಿದ್ದು, ಸಮಾಜದಲ್ಲಿ ಮಾತನಾಡುವ ಹಕ್ಕು ಕೇವಲ ರಾಜಕಾರಣಿಗಳಿಗೆ ಮಾತ್ರ ಎಂದು ಹೇಳಲಿ ಎಂದು ಸವಾಲೆಸೆದಿದ್ದಾರೆ.
ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು ಬಿಕೆ ಹರಿಪ್ರಸಾದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ಕೆಲವು ರಾಜಕಾರಣಿಗಳಿಗೆ ಮಾತ್ರವೇ? ಪ್ರಜೆಗಳಿಗೂ ಹಕ್ಕಿಲ್ಲವೇ, ರಾಜಕಾರಣಿಗಳಿಗೆ ಮಾತ್ರ ಹಕ್ಕಿದೆ ಅಂತ ಹೇಳಲಿ. ಪ್ರಜಾಪ್ರಭುತ್ವ ಸತ್ತು ಹೋಯ್ತು, ಈಗ ಇರೋದು ರಾಜಕಾರಣಿಗಳ ರಾಜ್ಯ ಅಂತ ಹೇಳಿ ಬಿಡಲಿ. ಹಾಗಿಲ್ಲ ಅಂತಾದ್ರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪೀಠಾಧಿಪತಿ ಮಾತ್ರ ಅಲ್ಲ, ಸಾಮಾನ್ಯ ಪ್ರಜೆಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿರಲೇಬೇಕು. ಹಾಗಾಗಿ ನಾವು ಅದನ್ನ ಮಾತ್ರ ಮಾಡಿದ್ದೇವೆಯೇ ಹೊರತು ಬೇರೆ ಮಾಡಿಲ್ಲ ಎಂದು ಹೇಳಿದರು. ಇಂಥಹ ರಾಜಕಾರಣಿಗಳಿಗೆ ಸದ್ಭುದ್ದಿ ಕೊಡಲಿ ಎಂದು ದೇವರಲ್ಲಿ ಕೇಳುತ್ತಿದ್ದೇನೆ. ನಮ್ಮ ಪಂಗಡದೊಳಗೆ ಯಾರಿಗೆಲ್ಲಾ ವೈಮನಸ್ಸು ಇದೆಯೋ ಅದು ದೂರವಾಗಲಿ ಎಂದು ಅವರು ಪ್ರಾರ್ಥಿಸಿದರು. .
You must be logged in to post a comment Login