LATEST NEWS
ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀ ವಿರೋಧ

ಉಡುಪಿ ಡಿಸೆಂಬರ್ 09: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಸಂಬಂಧಿಸಿ ಮತ್ತಷ್ಟು ವಿರೋಧ ಹೆಚ್ಚಾಗಿದೆ.ಇದೀಗ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಪೇಜಾವರ ಶ್ರೀ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ತಮ್ಮ ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು. ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ. ಮಕ್ಕಳೊಳಗೆ ಮತಬೇಧ ಉಂಟು ಮಾಡಬಾರದು. ಯಾರು ಏನು ಸೇವಿಸುತ್ತಾರೋ ಅದರ ಖರ್ಚು ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕೋಸರ. ಹೀಗಾಗಿ ಅಲ್ಲಿ ಜೀವನ ಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ

ಇನ್ನು ಮಂಗಳೂರಿನಲ್ಲಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವುದು ನಿಜಕ್ಕೂ ದುರಂತ. ಮತಾಂತರದ ಹಾವಳಿ ಇಡೀ ಮನೆಯನ್ನು ಬಲಿತೆಗೆದುಕೊಂಡಿದೆ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥರಿಂದ ಹೇಳಿದ್ದಾರೆ. ಮನಃಪೂರ್ವಕವಾಗಿ ಯಾರಾದರೂ ಮತಾಂತರವಾದರೆ ನಮ್ಮ ಆಕ್ಷೇಪವಿಲ್ಲ. ಆದರೆ ಒತ್ತಡ, ಆಮಿಷ ಹಾಗು ಬಲವಂತದಿಂದ ಮತಾಂತರ ಮಾಡಿದರೆ ಅದನ್ನು ಸಹಿಸಲಾಗುವುದಿಲ್ಲ. ಇದರಿಂದ ಸಮಾಜದಲ್ಲಿ ವೈಷಮ್ಯ ಸೃಷ್ಟಿಯಾಗುತ್ತದೆ ಎಂದರು