Connect with us

LATEST NEWS

ನನ್ನ ಅಭಿಪ್ರಾಯವನ್ನು ತಿರುಚಿ ಸಮಾಜವನ್ನು ನನ್ನ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿವೆ – ಪೇಜಾವರ ಶ್ರೀ

ಉಡುಪಿ ಡಿಸೆಂಬರ್ 17: ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಇದೀಗ ಪೇಜಾವರ ಶ್ರೀಗಳು ಮಾಧ್ಯಮಗಳಿಗೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಮಾಧ್ಯಮಗಳು ಮೊಟ್ಟೆ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ತಿರುಚಿ ಸಮಾಜವನ್ನು ನನ್ನ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.


ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವ ಸಂದರ್ಭ ಪೇಜಾವರ ಶ್ರೀಗಳು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಬದಲು ಹಣ ನೀಡಬೇಕು ಎಂದು ಸಲಹೆ ನೀಡಿದ್ದರು. ನಂತರ ಸ್ವಾಮಿಜಿಗಳ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆ ಇದೀಗ ಮಾಧ್ಯಮಗಳಿಗೆ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಶ್ರೀಗಳು ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಮಾಧ್ಯಮಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಹೊರಬೇಕು, ಸಮಾಜದ ಸ್ವಾಸ್ಥ್ಯ ಹಾಳುಮಾಡುವ ದುಸ್ಸಾಹಸಕ್ಕೆ ಕೈಹಾಕಬಾರದು, ಕೆಲವು ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚಿವೆ. ನನ್ನ ಅಭಿಪ್ರಾಯ ತಿರುಚಿ ನನ್ನ ವಿರುದ್ದ ಎತ್ತಿಕಟ್ಟುವ ಘಟನೆ ನಡೆದಿದ್ದು, ಇದನ್ನ ನಾನು ಖಂಡಿಸುತ್ತೇವೆ ಎಂದು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳು ನನ್ನ ಅಭಿಪ್ರಾಯ ಪಡೆಯುವ ವೇಳೆ ನನಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ ಶ್ರೀಗಳು. ಮಾಧ್ಯಮಗಳು ಶಾಲೆಯಲ್ಲಿ ಸಾಮೂಹಿಕವಾಗಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ಕೇಳಿದ್ದರೂ, ಇದಕ್ಕೆ ಸಹಜವಾಗಿ ಹೇಳಿದ್ದು ಆಹಾರದ ಹಕ್ಕು, ಸ್ವಾತಂತ್ರ್ಯ ಎಲ್ಲರಿಗೂ ಇದೆ, ಸಸ್ಯಹಾರಿಗಳಿಗೆ ಮೊಟ್ಟೆ ತಿನ್ನಿಸುವ ಕೆಲಸ ಅಗಬಾರದು, ಶಾಲೆಯಲ್ಲಿ ಕೆಲವರಿಗೆ ಮೊಟ್ಟೆ ವಿತರಣೆ, ಕೆಲವರಿಗೆ ನೀಡದಿರುವುದು ಮತಬೇದಕ್ಕೆ ಕಾರಣವಾಗುತ್ತೆ , ಹೀಗಾಗಿ ಶಾಲೆಯಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದೆ. ಆದರೆ ಬಳಿಕ ಮಾಹಿತಿಯ ಪ್ರಕಾರ ಶಾಲೆಯಲ್ಲಿ ಮೊಟ್ಟೆ ತಿನ್ನುವವರಿಗೆ ಮೊಟ್ಟೆ ಕೊಡುತ್ತಾರೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುತ್ತಾರೆ. ಈ ವಿಚಾರ ನಮಗೆ ತಿಳಿಸದೆ ಮೊಟ್ಟೆ ಹಂಚುವ ಕುರಿತು ಅಭಿಪ್ರಾಯವೇನು ಎಂಬ ಅರ್ಧ ಸತ್ಯ ಕೇಳಲಾಗಿದೆ.

ಸಮಾಜದ ಮುಂದೆ ನಮ್ಮ ಅಭಿಪ್ರಾಯ ಮುಂದಿಟ್ಟು ಶಾಲೆಯಲ್ಲಿ ಬಡ, ಆಶಕ್ತ, ದುರ್ಬಳ ಮಕ್ಕಳಿಗೆ ಮೊಟ್ಟೆ ಕೊಡುವುದನ್ನ ವಿರೋದಿಸುತ್ತಿದ್ದಾರೆ . ತಮ್ಮ ಅಭಿಪ್ರಾಯ ಏನು ಎಂದು ಜನಾಭಿಪ್ರಾಯ ಕೇಳುವ ಮೂಲಕ ಒಂದು ಸಮೂಹವನ್ನ ಎತ್ತಿಕಟ್ಟುವ ಕೆಲಸ ನಡೆದಿದೆ. ಸಮಾಜ ಸಂಘಟಿಸುವ ಕಾರ್ಯ ನಡೆಯಬೇಕು ಹೊರತು ಸಮಾಜ ಒಡೆಯುವ ಕೆಲಸ ನಡೆಯಬಾರದು, ಒಂದು ವರ್ಗ ಹಿಯಾಳಿಸುವ ಕೆಲಸ ಮಾಡಬಾರದು, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *