LATEST NEWS
ವಿಶ್ವ ಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆ ಅಲ್ಲ…ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು
ಉಡುಪಿ ಫೆಬ್ರವರಿ 17: ಅಯೋಧ್ಯೆ ರಾಮಮಂದಿರ ದೇಣಿಗೆ ಸಂಗ್ರಹ ಸಂಬಂಧಿಸಿದಂತೆ ರಾಜ್ಯದಲ್ಲಿ ವಿವಾದ ಜೋರಾಗಿದ್ದು, ರಾಜಕೀಯ ಮುಖಂಡರುಗಳ ನಡುವೆ ವಾಗ್ವಾದ ಪ್ರಾರಂಭವಾಗಿದೆ. ಈ ನಡುವೆ ಮಾಜಿ ಸಿಎಂ ಕುಮಾರ ಸ್ವಾಮಿಯವರ ದೇಣಿಗೆ ಸಂಬಂಧಪಟ್ಟಂತೆ ಮಾಡಿರುವ ಟ್ವೀಟ್ ಗಳಿಗೆ ಉಡುಪಿ ಪೇಜಾವರ ಶ್ರೀಗಳು ತೀಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ, ಅದೊಂದು ನೊಂದಣಿಯಾಗಿರುವ ಸಂಸ್ಥೆಯಾಗಿದ್ದು, ನೊಂದಾವಣೆಗೆ ಅದರದ್ದೆ ಆದ ನೀತಿ ನಿಯಮಾವಳಿಗಳು ಇದ್ದು, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಅದರದ್ದೇ ಆದ ಕಾನೂನು ಇದೆ ಎಂದರು. ಅಲ್ಲದೆ ದೇಣಿಗೆ ಸಂಗ್ರಹದಲ್ಲಿ ಪಾರರ್ದಶಕತೆ ಖಂಡಿತವಾಗಿ ಬೇಕೆ ಬೇಕು, ಒಂದು ವೇಳ ಸಂಶಯಗಳನ್ನು ಮುಂದೆ ಇಟ್ಟರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು, ಇಲ್ಲಿ ಮುಚ್ಚು ಮರೆಯ ಯಾವುದೆ ವಿಷಯಗಳು ನಡೆಯುದಿಲ್ಲ , ಆಡಿಟ್ ಆಗಿ ಅದಕ್ಕೆ ಬೇಕಾಗಿರುವಂತ ಪುರಾವೆಗಳನ್ನು ಕೊಡಲು ಸಾಧ್ಯವಿದೆ ಎಂದರು, ಕೇವಲ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ ಎಂದು ಅವರು ತಿಳಿಸಿದರು.
ಇನ್ನು ದೇಣಿಗೆ ಸಂಗ್ರಹ ಮಾಡುತ್ತಿರುವ ವಿಶ್ವಹಿಂದೂ ಪರಿಷತ್ ನ ಕಾರ್ಯಕರ್ತರು ಪುಂಡು ಪೋಕರಿಗಳು ಎಂದು ಹೇಳಿರುವ ಎಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ರಾಮ ಜನ್ಮಭೂಮಿ ಟ್ರಸ್ಟ್ ನಂತೆ ಅಧಿಕೃತವಾಗಿರುವ ವಿಶ್ವ ಪರಿಷತ್ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದೆ, ವಿಶ್ವ ಹಿಂದೂ ಪರಿಷತ್ ನ ಕಾರ್ಯರ್ತರಿಗೆ ದೇಣಿಗೆ ಸಂಗ್ರಹ ದ ಜವಾಬ್ದಾರಿ ನೀಡಲಾಗಿದೆ.
ವಿಹಿಂಪ ನ ಮುಖ್ಯಸ್ಥ ಆಯಾ ಊರಿನಲ್ಲಿ ಸಂಗ್ರಹ ನಿರತರಾಗಿದ್ದಾರೆ. ಹಿರಿಯ, ಮುಂದಾಳುಗಳ ನೇತೃತ್ವದಲ್ಲಿ ಕಾರ್ಯಕರ್ತರಯ ನಿಧಿ ಸಂಗ್ರಹ ಮಾಡುತ್ತಿದ್ದಾರೆ. ವಿಹಿಂಪ ಪುಂಡು ಪೋಕರಿಗಳ ಸಂಸ್ಥೆಯಲ್ಲ, ಇದು ಅಧಿಕೃತ ಸಂಸ್ಥೆ ಹಾಗಾಗಿ ಇಂತಹ ಮಾತು ಬಳಸುವುದು ಯುಕ್ತವಲ್ಲ, ಸಂಶಯಕ್ಕೆ ಪರಿಹಾರ ಇದೆ. ಆರೋಪ ಕ್ಕೆ ಪ್ರತ್ಯಾರೋಪ ಸಿಗುತ್ತದೆ, ಪ್ರಶ್ನೆಗೆ ಉತ್ತರ ಸಿಗುವುದಿಲ್ಲ, ಪ್ರಶ್ನೆ ಮಾಡಿದರೆ ಉತ್ತರ ಕೊಡಬಹುದು ಎಂದು ಪೇಜಾವರ ಶ್ರೀ ಪ್ರತಿಕ್ರಿಯಿಸಿದ್ದಾರೆ.