Connect with us

LATEST NEWS

ಸಾಕ್ಷಿ ಇಲ್ಲದೆ ರಾಮಮಂದಿರ ದೇಣಿಗೆ ಕುರಿತು ಆರೋಪ ಮಾಡುವುದು ತಪ್ಪು – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ ಫೆಬ್ರವರಿ 17: ರಾಮಮಂದಿರಕ್ಕೆ ಹಣ ಕೊಡದವರ ಮನೆಯನ್ನು ಯಾರೂ ಕೂಡ ಗುರುತು ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.


ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮಾಹಿತಿ ಸಂಗ್ರಹಿಸಿ ಇರಿಸುವಂತೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಆಗಲಿ ಅಥವಾ ಆರ್‌ಎಸ್‌ಎಸ್‌ ಆಗಲಿ ಯಾವುದೇ ಸೂಚನೆ ನೀಡಿಲ್ಲ. ದೇಣಿಗೆ ಕೊಟ್ಟವರ ಮಾಹಿತಿ ಮಾತ್ರ ಟ್ರಸ್ಟ್‌ಗೆ ಅಗತ್ಯವಾದುದು, ಆದ್ದರಿಂದ ಸಂಗ್ರಹಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.


ರಾಮ ಮಂದಿರ ನಿರ್ಮಾಣಕ್ಕಾಗಿ ನಿರೀಕ್ಷೆಗೂ ಅಧಿಕ ದೇಣಿಗೆ ಸಂಗ್ರಹವಾಗುತ್ತಿದೆ. ಅದರಿಂದಾಗಿ ಈಗ ದೇಣಿಗೆ ಸ್ವೀಕಾರ ರಶೀದಿ ಹಾಗೂ ಕೂಪನ್‌ಗಳ ಕೊರತೆ ಎದುರಾಗಿದೆ. ಹಾಗಾಗಿ ಮುಂದೆ ದೇಣಿಗೆ ಪಡೆಯಲು ಅನುಕೂಲವಾಗಲಿ ಎಂದು ಮನೆಗಳಿಗೆ ಗುರುತು ಹಾಕಿರಬಹುದು. ಹಾಗೆ ಮಾಡಿದ್ದರೆ. ಅದರು ತಪ್ಪೇನಲ್ಲ ಎಂದು ಸಮರ್ಥಿಸಿಕೊಂಡರು.

ಹೆಚ್‌ ಡಿ ಕುಮಾರಸ್ವಾಮಿ ಅವರು ಮಾಡಿರುವುದು ಗಂಭೀರ ಆರೋಪ. ಅದಕ್ಕೆ ಬೇಕಾದ ಸಾಕ್ಷ್ಯ ಅವರು ನೀಡಿ ಆರೋಪ ಮಾಡಬೇಕು. ಸುಮ್ಮನೇ ರಾಮ ಮಂದಿರ ಆರೋಪ ಮಾಡುವುದು ಬೇಡ ಎಂದು ಹೇಳಿದರು.

Advertisement
Click to comment

You must be logged in to post a comment Login

Leave a Reply