LATEST NEWS
ಪೇಜಾವರ ಶ್ರೀಗಳ ಆರೋಗ್ಯ ಕ್ಷೀಣ: ಉಡುಪಿಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

ಪೇಜಾವರ ಶ್ರೀಗಳ ಆರೋಗ್ಯ ಕ್ಷೀಣ: ಉಡುಪಿಯಲ್ಲೇ ಉಳಿದ ಸಿಎಂ ಯಡಿಯೂರಪ್ಪ
ಉಡುಪಿ ಡಿಸೆಂಬರ್ 28: ಪೇಜಾವರ ಶ್ರೀಗಳ ಆರೋಗ್ಯ ಬಿಗಡಾಯಿಸುತ್ತಿರುವ ಹಿನ್ನಲೆ ಇಂದು ಮತ್ತು ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಡುಪಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶ್ವಾಸಕೋಶ ಉಸಿರಾಟ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಸದ್ಯ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬರುತ್ತಿಲ್ಲ. ಕ್ಷಣ ಕ್ಷಣ ಶ್ರೀಗಳ ಆರೋಗ್ಯ ಸ್ಥಿತಿ ಕ್ಷೀಣವಾಗುತ್ತಿದೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ಪ್ರಯತ್ನ ಮುಂದುವರೆದಿದೆ.

ಶನಿವಾರ ಸಾಯಂಕಾಲ ಆಸ್ಪತ್ರೆಗೆ ವಾರದಲ್ಲಿ ಎರಡನೇ ಬಾರಿಗೆ ಆಗಮಿಸಿದ ಅವರು, ಆಸ್ಪತ್ರೆ ವೈದ್ಯರೊಂದಿಗೆ ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.ಇವತ್ತು ಮತ್ತು ನಾಳೆ ಉಡುಪಿಯಲ್ಲೇ ಇರುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಮಣಿಪಾಲ ಆಸ್ಪತ್ರೆಯು ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ‘ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಮತ್ತಷ್ಟು ಕ್ಷೀಣಿಸಿದೆ. ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ನಡೆಸಿದ ಪರೀಕ್ಷೆಗಳ ಪ್ರಕಾರ ಮಿದುಳು ತೀವ್ರ ನಿಷ್ಕ್ರಿಯವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.