LATEST NEWS
ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಉಡಪಿ ಡಿಸೆಂಬರ್ 20 : ಉಸಿರಾಟದ ತೊಂದರೆ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಶ್ರೀಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪೇಜಾವರ ಶ್ರೀಗಳನ್ನು ಶುಕ್ರವಾರ ಬೆಳಿಗ್ಗೆ 5 ಗಂಟೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೇಜಾವರ ಶ್ರೀಗಳ ಆರೋಗ್ಯ ಗಂಭೀರವಾಗಿದೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಪುತ್ತಿಗೆ ಶ್ರೀಗಳು, ರಾಜ್ಯ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸದ್ಯ ಶ್ರೀಗಳಿಗೆ ನ್ಯೂಮೋನಿಯಾಕ್ಕೆ ಆಂಟಿಬಯಾಟಿಕ್ ಹಾಗೂ ಇತರ ಸೂಕ್ತ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಕೆಎಂಸಿ ಆಸ್ಪತ್ರೆ ಮಾಹಿತಿ ನೀಡಿದೆ.