LATEST NEWS
ಫೆಂಗಲ್ ಚಂಡಮಾರುತ – ಕರಾವಳಿಯಲ್ಲಿ ಮೋಡಕವಿದ ವಾತಾವರಣ
ಮಂಗಳೂರು ಡಿಸೆಂಬರ್ 02: ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ ಇದ್ದು ನಿನ್ನೆಯಿಂದಲೂ ಮೋಡಕವಿದ ವಾತಾವರಾಣವಿದ್ದು ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
‘ಡಿ. 3 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಡಿ.4 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ,” ಎಂದು ತಿಳಿಸಿದ್ದಾರೆ.