ಸಲಿಂಗ ಕಾಮ ಆರೋಪ ದೈವದ ಪಾತ್ರಿ ತಲೆ ಬೋಳಿಸಿ ಹಲ್ಲೆ !

ಮಂಗಳೂರು ಮೇ 13: ಸಲಿಂಗ ಕಾಮದ ಆರೋಪದಡಿ ಬಿಕರ್ನಕಟ್ಟೆ ಬಳಿ ದೈವಪಾತ್ರಿಯೊಬ್ಬರಿಗೆ ಮಹಿಳೆಯರ ಸಹಿತ ನಾಗರಿಕರು ಸೇರಿ ಕೂದಲನ್ನು ಬಲವಂತವಾಗಿ ಕತ್ತರಿಸಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೈವ ಪಾತ್ರಿ ಲೋಕೇಶ್ ಪೂಜಾರಿ ಅವರ ಮೇಲೆ ಈ ದೌರ್ಜನ್ಯ ನಡೆದಿದ್ದು, ದೈವದ ನರ್ತನ ಸೇವೆ ನಡೆದ ಬಳಿಕ ಕೆಲವರು ಸೇರಿ ಈ ಹಲ್ಲೆ ನಡೆಸಿದ್ದಾರೆ. ದೈವ ಪಾತ್ರಿ ಲೊಕೇಶ್ ಅವರಿಗೆ ಜನರ ಗುಂಪೊಂದು ಪ್ರಶ್ನಿಸಿದ್ದು, ಕೈಯಲ್ಲಿನ ಖಡಗ ತೆಗೆಯುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಬಲವಂತವಾಗಿ ಪಾತ್ರಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ. ಈ ನಡುವೆ ಹಿರಿಯರು ತಡೆಯಲು ಯತ್ನಿಸಿದರೂ ಯುವಕರ ಗುಂಪು ಲೋಕೇಶ್ ಮೇಲೆ ಹಲ್ಲೆ ನಡೆಸಿದೆ.

ಈ ಘಟನೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಲೋಕೇಶ್ ಪೂಜಾರಿ ವೃತ್ತಿಯಲ್ಲಿ ದೈವದ ಪಾತ್ರಿಯಾಗಿದ್ದರೂ, ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದೈವದ ಪಾತ್ರಿಗಳು ಇಂಥ ವರ್ತನೆ ತೋರಿದರೆ ಹೇಗೆ ಎನ್ನುವ ಆಕ್ರೋಶದಿಂದ ಯುವಕರು ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

VIDEO

9 Shares

Facebook Comments

comments