Connect with us

  KARNATAKA

  ರಾಜ್ಯದ ಜನ ಜಗದೀಶ್ ಶೆಟ್ಟರ್ ಅವರನ್ನು ಕ್ಷಮಿಸುವುದಿಲ್ಲ: ಬಿ.ಎಸ್. ಯಡಿಯೂರಪ್ಪ

  ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

  ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ಕಾರಣವೇನು?, ರಾಜ್ಯದ ಜನ ಶೆಟ್ಟರ್ ಅವರನ್ನು ಕ್ಷಮಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

  ‘ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಇದಕ್ಕೆ ಶೆಟ್ಟರ್  ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಂದು ವೇಳೆ ಅವರು ಬಿಜೆಪಿಗೆ ಮರಳಿ ಬಂದರೆ ಸ್ವಾಗತಿಸುತ್ತೇವೆ’ ಎಂದು ಯಡಿಯೂರಪ್ಪ ಹೇಳಿದರು.

  ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

  ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply