DAKSHINA KANNADA
ಪೆರಿಯಶಾಂತಿ – ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ – ರಿಕ್ಷಾ ಚಾಲಕ ಸಾವು

ಉಪ್ಪಿನಂಗಡಿ ಎಪ್ರಿಲ್ 21: ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾಚಾಲಕ ಸಾವನಪ್ಪಿದ ಘಟನೆ ಪೆರಿಯಶಾಂತಿ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಮೃತರನ್ನು ರಿಕ್ಷಾ ಚಾಲಕ ಪೇರಮಜಲು ನಿವಾಸಿ ಪ್ರಭಾಕರ (40) ಎಂದು ಗುರುತಿಸಲಾಗಿದೆ. ಇವರು ನೆಲ್ಯಾಡಿ ಯಿಂದ ಗುಂಡ್ಯದತ್ತ ಪ್ರಯಾಣಿಸುತ್ತಿದ್ದಾಗ ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಪ್ರಭಾಕರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
