DAKSHINA KANNADA
ಪೆರ್ಲಂಪಾಡಿ – ಹಿಂಜಾವೇ ಕಾರ್ಯಕರ್ತನ ಕೊಲೆಯ ಪ್ರಮುಖ ಆರೋಪಿಯ ಬರ್ಬರ ಹತ್ಯೆ…!!

ಪುತ್ತೂರು ಜೂನ್ 4: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಚರಣ್ ರಾಜ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೆರ್ಲಂಪಾಡಿ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ತಲ್ವಾರ್ ನಿಂದ ಕಡಿದು ಕೊಲೆ ಮಾಡಿದ್ದಾರೆ.
ಚರಣ್ ರಾಜ್ ಎರಡು ವರ್ಷಗಳ ಹಿಂದೆ ಹಿಂದು ಜಾಗರಣ ವೇದಿಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು, ಇದೀಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಚರಣ್ ರಾಜ್ ಅವರ ಮೆಡಿಕಲ್ ಶಾಪ್ ನಾಳೆ ಪೆರ್ಲಂಪಾಡಿಯಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆ ಅಲ್ಲಿ ಕೆಲಸ ನಿರತರಾಗಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದು ತಲ್ವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

2019ರ ಸೆಪ್ಟೆಂಬರ್ 03ರಂದು ರಾತ್ರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭ ಹಿಂಜಾವೇ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಚರಣ್ ರಾಜ್, ಕಿರಣ್ ರೈ ಹಾಗೂ ಪ್ರೀತೇಶ್ ಶೆಟ್ಟಿ ಎಂಬವರನ್ನು ಬಂಧಿಸಲಾಗಿತ್ತು.