ಉಡುಪಿ, ಆಗಸ್ಟ್ 3 : ಜಿಲ್ಲೆಯಲ್ಲಿನ ಎಂಡೋ ಸಲ್ಫಾನ್ ಪೀಡಿತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕುಂದಾಪುರ ತಾಲೂಕಿನ ನಾಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇನಾಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಅವರು ಗುರುವಾರ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅವರ ಅಧ್ಯಕ್ಷತೆಯಲ್ಲಿ , ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋ ಸಲ್ಫಾನ್ ಸಾಮಾನ್ಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಎಂಡೋ ಪೀಡಿತರು ಚಿಕಿತ್ಸೆಗಾಗಿ ಪ್ರಯಾಣಿಸಲು ಹಾಗೂ ಅವರ ಜೊತೆಯಲ್ಲಿ ಸಹಾಯಕ್ಕಾಗಿ ಪ್ರಯಾಣಿಸುವ ಒಬ್ಬರು ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ನೀಡುವ ಕುರಿತಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಗಸ್ಟ್ 10 ರ ಒಳಗೆ ಅರ್ಜಿಗಳನ್ನು ಸ್ವೀಕರಿಸಿ, ಕೆ.ಎಸ್.ಆರ್.ಟಿ.ಸಿ ಉಡುಪಿ ಡಿಪೋ ಅಧಿಕಾರಿಗಳಿಗೆ ನೀಡಿ, ಶೀಘ್ರದಲ್ಲಿ ಪಾಸ್ ಗಳನ್ನು ವಿತರಿಸಲು ಅಭಿಯಾನ ರೀತಿಯಲ್ಲಿ ಕ್ರಮ ಕೈಗೊಳ್ಳಿ, ಎಂಡೋ ಪೀಡಿತರನ್ನು ದಾಖಲೆಗಳ ಪರಿಶೀಲನೆಗೆ ಕರೆಯದಂತೆ ಡಿಹೆಚ್‍ಓ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಹಾಸಿಗೆ ಹಿಡಿದಿರುವ ಎಂಡೋ ಪೀಡಿತರಿಗಾಗಿ ಸಂಚಾರಿ ಫಿಸಿಯೋಥೆರಪಿ ಕ್ಲಿನಿಕ್ ಸೇವೆಯನ್ನು ಒದಗಿಸುವ ಕುರಿತಂತೆ ಅಗತ್ಯ ವಾಹನ ಮತ್ತು ಸಿಬ್ಬಂದಿ ನೇಮಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಅವರಿಗೆ ಡಿಸಿ ಸೂಚಿಸಿದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಸದಸ್ಯರ ಅನುದಾನದಲ್ಲಿ ರೂ.10 ಲಕ್ಷಗಳನ್ನು ಅಂಗವಿಕಲರಿಗೆ ಮೀಸಲಿಡುವ ಕುರಿತಂತೆ ಕ್ರಮಕೈಗೊಳುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಎಂಡೋ ಪೀಡಿತ ಮಕ್ಕಳು ವಿಧ್ಯಾಭ್ಯಾಸ ಮಾಡುವ ಶಾಲೆಗಳಲ್ಲಿ ವಿಕಲಚೇತನ ಸ್ನೇಹಿ ಶೌಚಾಲಯ ನಿರ್ಮಿಸುವಂತೆ ಸೂಚಿಸಿದ ಡಿಸಿ, ಅಂತಹ ಶಾಲೆಗಳ ಪಟ್ಟಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಎಂಡೋ ಪೀಡಿತರನ್ನು ಗುರುತಿಸುವ ಮಾನದಂಡಗಳ ಬದಲಾವಣೆ ಮಾಡುವಂತೆ ಎಂಡೋ ಪೀಡಿತರ ಒಕ್ಕೂಟದ ಮನವಿಯ ಬಗ್ಗೆ ವಿಸ್ತøತ ಚರ್ಚೆ ನಡೆಯಿತು, ಸಾಧ್ಯವಾದಲ್ಲಿ ಎಂಡೋ ಪೀಡಿತ ಗ್ರಾಮಗಳ ಪುರ್ನ ಸಮೀಕ್ಷೆ ಮಾಡಿ, ಅರ್ಹರನ್ನು ಗುರುತಿಸಿ ಸೌಲಭ್ಯ ವಿತರಿಸುವಂತ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.
ಜಿಲ್ಲೆಯಲ್ಲಿ ಹೊಸದಾಗಿ 8 ಮಂದಿ ಎಂಡೋ ಪೀಡಿತನ್ನು ಗುರುತಿಸಲಾಗಿದ್ದು, ಅವರಿಗೆ ಅಗತ್ಯ ಸೌಲಭ್ಯ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ, 26 ಮಂದಿಗೆ ವಾಟರ್ ಬೆಡ್ ಗಳನ್ನು ವಿತರಿಸಲಾಗಿದ್ದು, ಬೇಡಿಕೆಗೆ ಅನುಗುಣವಾಗಿ ಉಳಿದವರಿಗೂ ನೀಡಲಾಗುವುದು, ಹಿಂದಿನ ಸಮೀಕ್ಷೆಯಲ್ಲಿ ಬಿಟ್ಟುಹೋಗಿರುವ ಗ್ರಾಮಗಳ ಸಮೀಕ್ಷೆ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ರೋಹಿಣಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕೋಟ್ಯಾನ್ ಉಪಸ್ಥಿತರಿದ್ದರು.

Facebook Comments

comments