Connect with us

DAKSHINA KANNADA

ಪೆರ್ನೆ ಮಹಿಳೆ ಸಂಶಯಾಸ್ಪದ ಸಾವು – ಚಿಕ್ಕಮ್ಮನ ಜೊತೆ ದೈಹಿಕ ಸಂಪರ್ಕಕ್ಕೆ ಯತ್ನಿಸಿ ಕೊಲೆ ಮಾಡಿದ ಅಪ್ರಾಪ್ತ ಬಾಲಕ ಅರೆಸ್ಟ್

ಪುತ್ತೂರು ಜೂನ್ 19: ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನಪ್ಪಿದ ಘಟನೆಗೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡ ರಾತ್ರಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಕುತ್ತಿಗೆ ಹಿಸುಕಿ ಕೊಲೆ ನಡೆಸಲಾಗಿದೆ ಎಂದು ತೀರ್ಮಾನಿಸಿರುವ ಪೊಲೀಸರು, ಆರೋಪಿ ಅಪ್ತಾಪ್ತ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಹೇಮಾವತಿ ಅವರ ಮನೆಯಲ್ಲಿ ಅಂದು ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕನ ಮೈ ಮೇಲೆ ಪರಚಿದ ಗಾಯಗಳಿರುವುದನ್ನು ಬಾಲಕನ ತಂದೆಯೇ ಪೊಲೀಸರಿಗೆ ತಿಳಿಸಿದ್ದ ಹಿನ್ನೆಲೆಯಲ್ಲಿ ಬಾಲಕನ ಮೇಲೆ ಪ್ರಾರಂಭಿಕ ಹಂತದಲ್ಲಿಯೇ ಸಂಶಯ ಮೂಡಿತ್ತು. ಆದರೆ ತನಿಖೆಯ ವೇಳೆ ತಾನು ಓರ್ವನೇ ಈ ಕೃತ್ಯವೆಸಗಿರುವುದಾಗಿ ಬಾಲಕ ತಪ್ಪು ಒಪ್ಪಿಕೊಂಡಿರುವುದರಿಂದ ಆತನನ್ನು ಬಂಧನ ಪ್ರಕ್ರಿಯೆಗೆ ಒಳಪಡಿಸಲಾಯಿತು. ಬಾಲಕ ಮಲಗಿದ್ದ ತನ್ನ ಚಿಕ್ಕಮ್ಮನೊಡನೆ ಲೈಂಗಿಕ ಕ್ರಿಯೆ ಬಯಸಿ ಆಕೆಯನ್ನು ಸ್ಪರ್ಶಿಸಿದನೆಂದು, ಎಚ್ಚರಗೊಂಡ ಹೇಮಾವತಿ ಆತನ ಕೃತ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುಮ್ಮನೆ ನಿದ್ರಿಸಬೇಕೆಂದು ಗದರಿಸಿದ್ದರು. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ನಿದ್ರಿಸಲಾಗದೆ ಒದ್ದಾಡಿದ್ದಾನೆ.

ಸುಮಾರು ಅರ್ಧ ಗಂಟೆಯ ಬಳಿಕ ಆಕೆಯನ್ನು ಕೊಲ್ಲುವ ನಿರ್ಧಾರವನ್ನು ತಳೆದಿದ್ದ. ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನನ್ನು ಕುತ್ತಿಗೆ ಹಿಸುಕಿ ಉಸಿರು ಕಟ್ಟಿಸಿ ಕೊಲೆಗೈದಿರುವುದಾಗಿ ವಿಚಾರಣೆಯ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ ಬಾಲಕನಿಗೆ ಪರಚಿದ್ದು, ಈ ಪರಚಿದ ಗಾಯ ಆತನನ್ನು ಕಾನೂನು ಕುಣಿಕೆಗೆ ಸಿಲುಕಿಸಲು ಸಹಕಾರಿಯಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *