Connect with us

    DAKSHINA KANNADA

    ವ್ಯಾಯಾಮ ಹೇಳುವ ನೆಪದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ –ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ…

    ಪುತ್ತೂರು: ಮಡಿಕೇರಿ ಮೂಲದ ಅಪ್ರಾಪ್ತೆ ವಯಸ್ಸಿನ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.


    ಬಂಧಿತರನ್ನು ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಎಂದು ಗುರುತಿಸಲಾಗಿದ್ದು, ಇವರು ಪುತ್ತೂರಿನ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿ ಸೊಂಟ ನೋವು ದೈಹಿಕ ಶಿಕ್ಷಕರಿಗೆ ಹೇಳಿದ್ದು, ಈ ಸಂದರ್ಭ ವಿದ್ಯಾರ್ಥಿನಿಗೆ ಎಲ್ಯಾಸ್ ಪಿಂಟೋರವರು ವ್ಯಾಯಾಮ ಮಾಡಿಸಿದರೆಂದೂ ಈ ವೇಳೆ ಆಕೆಯ ಸೊಂಟ ಮುಟ್ಟಿದರೆಂದೂ ಆರೋಪ ಕೇಳಿ ಬಂದಿದೆ.

    ಈ ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು. ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *