LATEST NEWS
ಪೆಟ್ರೋಲ್ ಡಿಸೇಲ್ ಜೊತೆಗೆ ಗ್ಯಾಸ್ ಬೆಲೆ ಏರಿಕೆ
ನವದೆಹಲಿ : ಕೊನೆಗೂ ನಾಲ್ಕು ತಿಂಗಳ ಬಳಿಕ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಎಲ್ ಪಿಜಿ ಬೆಲೆಗಳನ್ನು ಏರಿಸಲಾಗಿದೆ. ರಷ್ಯಾ ಉಕ್ರೇನ್ ಯುದ್ದದಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ ಕೂಡ ಚುನಾವಣೆ ಹಿನ್ನಲೆ ಕೇಂದ್ರ ಸರಕಾರ ತೈಲ ಬೆಲೆ ಏರಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿತ್ತು.
ಇದೀಗ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಎರಡನ್ನು ಏರಿಕೆ ಮಾಡಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹96.21, ಪ್ರತಿ ಲೀಟರ್ ಡೀಸೆಲ್‌ಗೆ ₹87.47; ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹110.78, ಡೀಸೆಲ್ ₹94.94; ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‌ಗೆ ₹101.42 ಮತ್ತು ಡೀಸೆಲ್‌ಗೆ 85.80 ತಲುಪಿದೆ.
ಬರೋಬ್ಬರಿ 137 ದಿನಗಳವರೆಗೆ ತಟಸ್ಥವಾಗಿದ್ದ ಇಂಧನ ದರ ಇದೀಗ ಏರಿಕೆ ಕಂಡಿದೆ. ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ದರದಲ್ಲಿ ಯಾವುದೇ ಬದಲಾವಣೆ ಕಂಡಿರಲಿಲ್ಲ. ಇದೀಗ ಚುನಾವಣೆ ಮುಗಿದ್ದಿದ್ದು , ಮತ್ತೆ ದರ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮಾತ್ರವಲ್ಲದೆ, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿಯೂ 50 ರೂಪಾಯಿ ಏರಿಕೆ ಕಂಡಿದೆ. 2021ರ ಅಕ್ಟೋ ಬರ್ 6ರಂದು ಕೊನೆಯ ಬಾರಿಗೆ ದರ ಏರಿಕೆಯಾಗಿತ್ತು. ದೆಹಲಿಯಲ್ಲಿ 14 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 949.50 ರೂಪಾಯಿ ಆಗಿದೆ.