KARNATAKA
ಸತತ ಎರಡನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ
ಮಂಗಳೂರು ಮಾರ್ಚ್ 23: ಸತತ ಎರಡನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಗಳಲ್ಲಿ ಏರಿಕೆಯಾಗಿದೆ. ನಿನ್ನೆ 84 ಪೈಸೆ ಏರಿಕೆಯಾಗಿದ್ದರೆ. ಇಂದೂ ಕೂಡ ಮತ್ತೆ 80 ಪೈಸ್ ಏರಿಕೆಯಾಗಿದೆ.
ಮಂಗಳವಾರ ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ಲೀಟರ್ಗೆ ತಲಾ 84 ಪೈಸೆಯಷ್ಟು ಆಗಿದೆ. ಹೀಗಾಗಿ, ನಿನ್ನೆಯಿಂದ ಲೀಟರ್ಗೆ ಒಟ್ಟು 1.64 ರೂಪಾಯಿ ಏರಿಕೆ ಆದಂತಾಗಿದೆ. ಪರಿಷ್ಕರಣೆ ಬಳಿಕ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರಿಗೆ 102.26 ರೂಪಾಯಿ ಹಾಗೂ ಡೀಸೆಲ್ ದರವು ಲೀಟರಿಗೆ 86.58 ರೂಪಾಯಿ ಆಗಿದೆ.
ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ ₹97.01 ಮತ್ತು ಡೀಸೆಲ್ ದರ ₹88.27 ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ದರ ₹111.67 ಮತ್ತು ಡೀಸೆಲ್ ದರ ₹95.85, ಚೆನ್ನೈನಲ್ಲಿ ಪೆಟ್ರೋಲ್ ದರ ₹102.91, ಡೀಸೆಲ್ಗೆ ₹92.95 ಹಾಗೂ ಕೋಲ್ಕತ್ತದಲ್ಲಿ ಪೆಟ್ರೋಲ್ ₹106.34 ಮತ್ತು ಡೀಸೆಲ್ಗೆ ₹91.42 ಆಗಿದೆ.
You must be logged in to post a comment Login