LATEST NEWS
ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ನಡುವೆ ಅಡುಗೆ ಅನಿಲದ ಬೆಲೆಯೂ ಏರಿಕೆ..!!
ಮಂಗಳೂರು ಫೆಬ್ರವರಿ 15: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆಗಳು ಏರಿಕೆಯಾಗುತ್ತಲೆ ಇದ್ದು, ಸೋಮವಾರ ಮತ್ತೆ ತೈಲೋತ್ಪನ್ನಗಳ ದರಗಳು ಏರಿಕೆ ಕಂಡಿದ್ದು, ಪೆಟ್ರೋಲ್, ಡೀಸೆಲ್ ದರಗಳು ದಿನದಿಂದ ದಿನಕ್ಕೆ ದಾಖಲೆ ಬರೆಯುತ್ತಲೇ ಇದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 26 ಪೈಸೆ ಏರಿಕೆಯಾಗಿ 88.99 ರೂ ಗೆ ಏರಿಕೆಯಾಗಿದೆ. ಇದು ದಾಖಲೆ ಗರಿಷ್ಠ ಮಟ್ಟವಾಗಿದೆ. ಡೀಸೆಲ್ ದರ ಕೂಡ 79.35ರೂ ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.44 ಏರಿಕೆಯಾಗಿದ್ದು, ಡೀಸೆಲ್ ದರ 86.33ರೂ ಗೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಪೆಟ್ರೋಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 91.95ರೂ ಹಾಗೂ ಡೀಸೆಲ್ ಬೆಲೆ 84.10 ರೂ ಗೆ ಏರಿಕೆಯಾಗಿದೆ.
ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ 91.17 ರೂಗೆ ಮತ್ತು ಡೀಸೆಲ್ 84.42 ರೂಗೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ 90.24 ರೂಗೆ ಮತ್ತು ಡೀಸೆಲ್ 82.92 ರೂಗೆ ಏರಿಕೆಯಾಗಿದೆ.
ಇನ್ನೊಂದೆಡೆ ಎಲ್ ಪಿಜಿ ಅಡುಗೆ ಅನಿಲ ದರ ಏರಿಕೆ ಮಾಡಲಾಗಿದ್ದು, 14.2 ಕೆಜಿ ಸಿಲಿಂಡರ್ ದರ 50 ರೂಪಾಯಿ ಏರಿಕೆ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ದರ 769 ರೂಪಾಯಿಯಷ್ಟಾಗಲಿದೆ. ಸಬ್ಸಿಡಿ ರಹಿತ ಎಲ್ ಪಿ ಜಿ ಸಿಲಿಂಡರ್ ದರವನ್ನು ಸಾಮಾನ್ಯವಾಗಿ ತಿಂಗಳಿಗೊಮ್ಮೆ ಏರಿಕೆ ಮಾಡಲಾಗುತ್ತದೆ. ಸ್ಥಳೀಯ ತೆರಿಗೆ ಆಧಾರದಲ್ಲಿ ದೇಶಾದ್ಯಂತ ಎಲ್ ಪಿಜಿ ದರ ವ್ಯತ್ಯಯವಾಗಲಿದೆ. ಫೆ. 4 ರಂದು ಸಬ್ಸಿಡಿ ರಹಿತ ಸಿಲಿಂಡರ್ ದರವನ್ನು 25 ರೂಪಾಯಿಗಳನ್ನು ಏರಿಕೆ ಮಾಡಲಾಗಿತ್ತು. ಸರ್ಕಾರ ಪ್ರತಿ ವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ನೀಡಲಿದೆ.