LATEST NEWS
ಬಜೆಟ್ ಮಂಡಿಸಿ 4 ದಿನಗಳೊಳಗೆ ಮತ್ತೆ ಏರಿಕೆಯಾದ ಪೆಟ್ರೋಲ್ ಡಿಸೆಲ್ ಬೆಲೆ
ನವದೆಹಲಿ: ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡಿಸೆಲ್ ಗೆ ಸೆಸ್ ವಿಧಿಸಿದ್ದ ಕೇಂದ್ರ ಸರಕಾರ ವಾಹನ ಸವಾರರಿಗೆ ಇದರಿಂದ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ 4 ದಿನಗಳಲ್ಲೇ ಮತ್ತೆ ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ಏರಿಕೆಯಾಗಿದ್ದು, ದೇಶದ ಕೆಲವು ಪ್ರದೇಶಗಳಲ್ಲಿ ಸದ್ಯದಲ್ಲೇ ನೂರರ ಗಡಿ ದಾಟಲಿದೆ ಎಂದು ಹೇಳಲಾಗಿದೆ.
ಸತತ ಏಳು ದಿನಗಳವರೆಗೆ ಸ್ಥಿರವಾಗಿ ಉಳಿದಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗುರುವಾರ ಏರಿಕೆ ಕಂಡು ದಾಖಲೆಯ ಮಟ್ಟ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ಪೆಟ್ರೋಲ್ ಬೆಲೆಯನ್ನು 35 ಪೈಸೆ ಹೆಚ್ಚಿಸಲಾಗಿದ್ದು, ಲೀಟರ್ ಗೆ 86.65 ರೂ.ತಲುಪಿದೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ. ಇಂಧನ ಬೆಲೆಗಳು ಪ್ರತಿ ಲೀಟರ್‌ಗೆ 35 ಪೈಸೆಗಳಷ್ಟು ಹೆಚ್ಚಾಗಿದೆ, ಆದರೆ ಅವುಗಳ ಸ್ಥಳೀಯ ಸುಂಕವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 93.18ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ ಪ್ರತೀ ಲೀಟರ್ ಗೆ 83.65ರೂಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 87.99ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ ಪ್ರತೀ ಲೀಟರ್ ಗೆ 80.39ರೂಗೆ ಏರಿಕೆಯಾಗಿದೆ. ಚೆನ್ನೈ ನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 89.11ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ ಪ್ರತೀ ಲೀಟರ್ ಗೆ 82.03ರೂಗೆ ಏರಿಕೆಯಾಗಿದೆ. ಹೈದರಾಬಾದ್ ನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 90.08ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ ಪ್ರತೀ ಲೀಟರ್ ಗೆ 83.79ರೂಗೆ ಏರಿಕೆಯಾಗಿದೆ.
ಕೇರಳದ ತಿರುವನಂತಪುರದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 88.51ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ ಪ್ರತೀ ಲೀಟರ್ ಗೆ 82.63ರೂಗೆ ಏರಿಕೆಯಾಗಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 89.52ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 81.42 ರೂಗೆ ಏರಿಕೆಯಾಗಿದೆ.