LATEST NEWS
ಕರ್ನಾಟಕದಲ್ಲಿ 100 ಗಡಿ ದಾಟಿದ ಪೆಟ್ರೋಲ್ ಬೆಲೆ…!!

ಮಂಗಳೂರು ಜೂನ್ 07: ಕೊರೊನಾ ನಡುವೆ ಜನರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೆಟ್ರೋಲ್ ಬೆಲೆ ಕರ್ನಾಟಕದಲ್ಲಿ ಮೊದಲ ಬಾರಿಗೆ 100ರ ಗಡಿ ದಾಟಿದ್ದು, ಕರ್ನಾಟಕದ ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದೆ.
ಇಡೀ ದೇಶ ಕೊರೊನಾದಿಂದ ತತ್ತರಿಸಿ ಲಾಕ್ ಡೌನ್ ನಲ್ಲಿದ್ದರೂ ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ, ರಸ್ತೆಯಲ್ಲಿ ವಾಹನ ಸರಿಯಾಗಿ ಇಳಿಯದೇ ಎರಡು ವರ್ಷಗಳೇ ಕಳೆದಿದೆ ಆದರೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದ್ದು, ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಸರಕಾರ ತೆರಿಗೆ ವಿನಾಯಿತಿ ನೀಡುವುದು ಕಷ್ಟಕರವಾಗಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಕರ್ನಾಟಕದ ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಶತಕ ಬಾರಿಸಿದೆ! ಕರ್ನಾಟಕ ಸೇರಿ ಭಾರತದ 6 ರಾಜ್ಯಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ.
ಕರ್ನಾಟಕದ ಉತ್ತರ ಕನ್ನಡದ ಶಿರಸಿ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಶಿರಸಿ ಸೇರಿದಂತೆ ಮಲೆನಾಡು ಭಾಗದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100.22 ರೂ. ಆಗಿದೆ. ಕರಾವಳಿ ಭಾಗದಲ್ಲೂ ಪೆಟ್ರೋಲ್ ದರ 100 ರೂ. ಸಮೀಪಿಸುತ್ತಿದೆ. ಕಾರವಾರದಲ್ಲಿ 99.85 ರೂ. ಇದೆ. ಡೀಸೆಲ್ ಬೆಲೆಯೂ ಏರಿಕೆಯಾಗುತ್ತಿದ್ದು, ಶಿರಸಿಯಲ್ಲಿ 92.88 ರೂ.ಗೆ ಏರಿಕೆಯಾಗಿದೆ.
ಚಿಕ್ಕಮಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 100.06 ರೂ. ಆಗಿದೆ. ಬಳ್ಳಾರಿಯಲ್ಲಿ 1 ಲೀಟರ್ ಪೆಟ್ರೋಲ್ಗೆ 100.08 ರೂ. ಆಗಿದೆ. ಬೆಂಗಳೂರಿನಲ್ಲೂ ಪೆಟ್ರೋಲ್ ಬೆಲೆ 99 ರೂ. ಗಡಿಯಲ್ಲಿದ್ದು, ಮುಂದಿನ ವಾರದೊಳಗೆ ಶತಕ ಬಾರಿಸುವ ಸಾಧ್ಯತೆಯಿದೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲೂ ಪೆಟ್ರೋಲ್ ಬೆಲೆ 100 ರೂ.ನತ್ತ ದಾಪುಗಾಲಿಡುತ್ತಿದೆ.