Connect with us

    KARNATAKA

    16 ದಿನಗಳಲ್ಲಿ 14ನೇ ಬಾರಿ ಪೆಟ್ರೋಲ್‌ ಬೆಲೆ ಏರಿಕೆ….!!

    ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ದರ ಕಳೆದ ಎರಡು ವಾರಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದು, ಎರಡು ವಾರಗಳಲ್ಲಿ 10 ರೂಪಾಯಿಗಳಷ್ಟು ಏರಿಕೆ ಕಂಡಿದೆ.

    ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರಿಗೆ 91 ಪೈಸೆಯಷ್ಟು ಹೆಚ್ಚಾಗಿದ್ದು ₹111.16ಕ್ಕೆ ಏರಿಕೆ ಆಗಿದೆ. ಡೀಸೆಲ್‌ ದರ ಲೀಟರಿಗೆ 85 ಪೈಸೆ ಹೆಚ್ಚಳವಾಗಿದ್ದು ₹94.86ಕ್ಕೆ ತಲುಪಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರ ₹ 89.02 ರಿಂದ ₹ 94.86 ಕ್ಕೆ ಏರಿಕೆಯಾಗಿದೆ.
    ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆಗಳಷ್ಟು ಏರಿಕೆಯಾಗಿದೆ. ನಿನ್ನೆ 104.61 ರಷ್ಟಿದ್ದ ಲೀಟರ್ ಪೆಟ್ರೋಲ್ ಬೆಲೆ ₹ 105.41 ಆಗಿದ್ದರೆ, ಲೀಟರ್ ಡೀಸೆಲ್ ಬೆಲೆ 96.677ಕ್ಕೆ ಮಾರಾಟವಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply