KARNATAKA
ಮತ್ತೆ ತೈಲ ಬೆಲೆ ಏರಿಕೆ – ಬೆಂಗಳೂರಿನಲ್ಲಿ ಈಗ ಪೆಟ್ರೋಲ್ ಬೆಲೆ 105 ರೂ
ನವದೆಹಲಿ ಜುಲೈ 15: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಸದ್ಯಕ್ಕೆ ಬ್ರೇಕ್ ಸಿಗುವ ಸಾಧ್ಯತೆ ಇಲ್ಲ ಎಂದು ಕಂಡು ಬರುತ್ತಿದ್ದು, ಇಂದು ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.105ರ ಗಡಿ ದಾಟಿದಂತಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.32 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.6ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.93ರೂ ಗೆ ಏರಿಕೆಯಾಗಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 107.6ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 97.51 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.8ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.08 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.28ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.44 ರೂ ಗೆ ಏರಿಕೆಯಾಗಿದೆ.