LATEST NEWS
ಮೂರು ವಾರಗಳ ನಂತರ ಪೆಟ್ರೋಲ್ ಬೆಲೆಯಲ್ಲಿ ಏರಿಕೆ….!!
ನವದೆಹಲಿ: ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಡಿಸೇಲ್ ಸತತ ನಾಲ್ಕನೆ ದಿನ ಮತ್ತೆ ಏರಿಕೆ ಕಂಡಿಗೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದೇಶಾದ್ಯಂತ ಇಂದು ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 27 ಪೈಸೆ ಹೆಚ್ಚಳವಾಗಿದೆ.
ಕಳೆದ ಜುಲೈ 17ರ ನಂತರ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ಏರಿಕೆ ಕಂಡರೆ ಡೀಸೆಲ್ ಬೆಲೆ ಮೊನ್ನೆ ಸೆಪ್ಟೆಂಬರ್ 24ರ ನಂತರ ನಾಲ್ಕನೇ ಬಾರಿ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 101.39 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 89.57 ಪೈಸೆಯಷ್ಟಾಗಿದೆ.. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ಗೆ 99.15 ರೂಪಾಯಿ ನಿಗದಿ ಆಗಿದೆ. ಲೀಟರ್ ಡೀಸೆಲ್ ದರ 94.17 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.06 ರೂಪಾಯಿ ಇದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.45 ರೂಪಾಯಿ ಇದೆ.
ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.98 ರೂಪಾಯಿಗೆ ಏರಿಕೆ ಆಗಿದೆ. ಛಂಡೀಗಢದಲ್ಲಿ ಲೀಟರ್ ಪೆಟ್ರೋಲ್ಗೆ 97.61 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.31 ರೂಪಾಯಿ ನಿಗದಿ ಆಗಿದೆ.