LATEST NEWS
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ – ಕಾಂಗ್ರೆಸ್ ಪ್ರತಿಭಟನೆ
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ – ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು ಸೆಪ್ಟೆಂಬರ್ 21 : ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾಂಗ್ರೇಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಮಾತ್ರ ದಿನೇ ದಿನೇ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಅಚ್ಚೆ ದಿನ್ ಎಂದು ಪ್ರತಿಭಟನಾಕಾರರು ಟೀಕಿಸಿದರು.
ಜನಸಾಮಾನ್ಯರ ಜೀವವನ್ನು ಕೇಂದ್ರ ಸರಕಾರ ದುಸ್ತರ ಮಾಡುತ್ತಿದೆ ಎಂದು ಆಕೋಪಿಸಿದ ಪ್ರತಿಭಟನಾಕಾರರು ದಿನನಿತ್ಯದ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತಿರುವುದು ದೇಶದ ಜನರನ್ನು ಕಾಡುತ್ತಿದೆ ಎಂದು ದೂರಿದರು. ಪ್ರತಿಭಟನೆಯಲ್ಲಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
You must be logged in to post a comment Login