Connect with us

LATEST NEWS

ಬೆಂಗಳೂರಿನಲ್ಲಿ ಶತಕ ಭಾರಿಸಿದ ಪೆಟ್ರೋಲ್ ಬೆಲೆ

ಬೆಂಗಳೂರು ಜೂನ್ 18: ಕೊರೊನಾ ಲಾಕ್ ಡೌನ್ ನಡುವೆಯೂ ಪೆಟ್ರೋಲ್ ಬೆಲೆ ಏರಿಕೆಯಲ್ಲೇ ಇದ್ದು, ಬೆಂಗಳೂರಿನಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆಯು ₹100ರ ಗಡಿ ದಾಟಿದೆ.


ಈಗಾಗಲೇ ದೇಶ ಹಾಗೂ ರಾಜ್ಯದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 100 ಗಡಿ ದಾಟಿದ್ದು, ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಶತಕ ಬಾರಿಸಿದೆ. ಡೀಸೆಲ್ ಬೆಲೆಯು ಪ್ರತಿ ಲೀಟರ್‌ಗೆ ₹92.97ರಷ್ಟಾಗಿದೆ. ಆರು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆಯು ₹86.47 ಇದ್ದು ಈಗ 100 ರೂಪಾಯಿ ಆಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬೆಲೆ ಹೆಚ್ಚಿಸಿದ್ದು, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್‌ ದರ ಶತಕ ತಲುಪಿದೆ.