MANGALORE
ಪೆಟ್ರೋಲ್-ಡಿಸೆಲ್ ಮೇಲೆ ತೆರಿಗೆ ಹೆಚ್ಚಿಸಿ ರಾಜ್ಯ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ – ವೇದವ್ಯಾಸ್ ಕಾಮತ್
ಪೆಟ್ರೋಲ್-ಡಿಸೆಲ್ ಮೇಲೆ ತೆರಿಗೆ ಹೆಚ್ಚಿಸಿ ರಾಜ್ಯ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ – ವೇದವ್ಯಾಸ್ ಕಾಮತ್
ಪೆಟ್ರೋಲ್-ಡಿಸೆಲ್ ಮೇಲೆ ತೆರಿಗೆ ಹೆಚ್ಚಿಸಿ ಕೇಂದ್ರ ಸರಕಾರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಷಡ್ಯಂತ್ರ- ಶಾಸಕ ಕಾಮತ್
ಮಂಗಳೂರು ಜನವರಿ 5: ರಾಜ್ಯ ಸರಕಾರ ಪೆಟ್ರೋಲ್-ಡಿಸೆಲ್ ಮೇಲೆ ಕ್ರಮವಾಗಿ 32% ಮತ್ತು 21% ತೆರಿಗೆಯನ್ನು ಹೆಚ್ಚಿಸುವುದರ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆದಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ರಾಜತಾಂತ್ರಿಕ ನಡೆಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಿ ನಮ್ಮ ದೇಶದ ಜನರಿಗೆ ಪೆಟ್ರೋಲ್, ಡಿಸೆಲ್ ಬೆಲೆ ಇಳಿಕೆಯಾಗುವಂತೆ ದಿಟ್ಟತನದ ಕ್ರಮ ಕೈಗೊಂಡಿದ್ದಾರೆ.
ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ತೆರಿಗೆ ಹೆಚ್ಚಳ ಮಾಡಿ ಪೆಟ್ರೋಲ್, ಡಿಸೆಲ್ ಬೆಲೆ ಹೆಚ್ಚಿಸಿರುವುದು ವಿಪರ್ಯಾಸ. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಹಿಂದೆ ಪೆಟ್ರೋಲಿಯಂ ಉತ್ಪನ್ನಗಳ ಖರೀದಿಯಲ್ಲಿ ಬಾಕಿ ಇರಿಸಿದ್ದ 2 ಲಕ್ಷ ಕೋಟಿ ರೂಪಾಯ ಸಾಲದ ಬಾಂಡ್ ಅನ್ನು ತೀರಿಸಿರುವ ನರೇಂದ್ರ ಮೋದಿಯವರ ಕ್ರಮ ಶ್ಲಾಘನೀಯ. ಅದರ ನಂತರ ಈಗ ಪೆಟ್ರೋಲ್, ಡಿಸೆಲ್ ಬೆಲೆ ಇಳಿದಿರುವಾಗ ಪುನ: ಹೆಚ್ಚಳ ಮಾಡಿರುವ ರಾಜ್ಯ ಸರಕಾರ ಇನ್ಯಾವ ಮುಖ ಇಟ್ಟು ಪ್ರತಿಭಟನೆ ಮಾಡುತ್ತದೆ ಎಂದು ಶಾಸಕ ಕಾಮತ್ ಪ್ರಶ್ನಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು ಹಿಂದೆ ಪ್ರಧಾನಿಯವರ ಪ್ರತಿಕೃತಿ ದಹಿಸಿದ್ದರು. ಈಗ ಅವರಿಗೆ ಜನರ ಮುಂದೆ ಹೋಗಲು ಯಾವ ನೈತಿಕತೆ ಇದೆ. ಜನರು ಪೆಟ್ರೋಲ್, ಡಿಸೀಲ್ ಖರೀದಿಸಲು ಪೆಟ್ರೋಲ್ ಬಂಕಿಗೆ ಹೋಗುವಾಗ ಮತ್ತೆ ಬೆಲೆ ಹೆಚ್ಚು ಆಗಿರುವುದರಿಂದ ಸಹಜವಾಗಿ ಇದಕ್ಕೆ ಮೋದಿಯವರೇ ಕಾರಣ ಎಂದು ಅಂದುಕೊಂಡು ಮೋದಿ ಹಾಗೂ ಕೇಂದ್ರ ಸರಕಾರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಬೇಕು ಎನ್ನುವ ಷಡ್ಯಂತ್ರ ರಾಜ್ಯ ಸರಕಾರದಿಂದ ನಡೆಯುತ್ತಿದೆ.
ಇದು ಜನರಿಗೆ ಗೊತ್ತಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಪೆಟ್ರೋಲ್, ಡಿಸೀಲ್ ಮೇಲಿನ ತೆರಿಗೆಯಲ್ಲಿ ಕೇಂದ್ರಕ್ಕೆ ಹೋಗುವ ತೆರಿಗೆಗಿಂತ ದ್ವಿಗುಣ ತೆರಿಗೆ ರಾಜ್ಯ ಸರಕಾರಕ್ಕೆ ಬರುತ್ತದೆ. ಹಾಗಿರುವಾಗ ತೆರಿಗೆ ಇಳಿಸಬೇಕಾಗಿರುವ ರಾಜ್ಯ ಸರಕಾರ ಏಕಾಏಕಿ ಇಷ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಿಸಿರುವುದರಿಂದ ಬರುವ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಜನ ಅದಕ್ಕೆ ಉತ್ತರ ನೀಡಲಿದ್ದಾರೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
Facebook Comments
You may like
ಬೆಸಿಗೆಯಲ್ಲಿ ಇಳಿಕೆಯಾಗಲಿದೆಯಂತೆ ಪೆಟ್ರೋಲ್ ಬೆಲೆ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೈಸಿಕಲ್ ಏರಿದ ರಾಬರ್ಟ್ ವಾದ್ರಾ
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
ಕರುಣೆ ಇಲ್ಲದ ಕೇಂದ್ರ ಸರಕಾರದಿಂದ ಹಗಲು ದರೋಡೆ – ರಮಾನಾಥ ರೈ
ಬಡವರ ಬಿಪಿಎಲ್ ಕಾರ್ಡ್ ಮಾತ್ರ ಬಿಜೆಪಿ ಸರಕಾರಕ್ಕೆ ಕಾಣೋದು – ಯುಟಿ ಖಾದರ್
ಬಿಲ್ಲವ ಸಮುದಾಯದ ವಿರುದ್ದ ವಿವಾದಾತ್ಮಕ ಹೇಳಿಕೆ:ಪಡುಮಲೆ ಕೋಟಿ ಚೆನ್ನಯರ ಗರಡಿಯಲ್ಲಿ ಜಗದೀಶ್ ಅಧಿಕಾರಿ ಕ್ಷಮೆಯಾಚನೆ
You must be logged in to post a comment Login