LATEST NEWS
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ – ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್ ಬೆಲೆ 115 ರೂಪಾಯಿ
ನವದೆಹಲಿ ಅಕ್ಟೋಬರ್ 07: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದ್ದು, ಜನ ಸಾಮಾನ್ಯರ ಜೀವನ ದುಸ್ತರವಾಗುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾದರೂ ಕೂಡ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಲ್ಲಿದೆ.
ಪ್ರತಿ ಪೆಟ್ರೋಲ್ ದರ 30 ಪೈಸೆ ಮತ್ತು ಡೀಸೆಲ್ 35 ಪೈಸೆ ಹೆಚ್ಚಳ ಕಂಡಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹103.24 ಇದ್ದರೆ, ಮುಂಬೈನಲ್ಲಿ ₹109 ದಾಟಿದೆ. ಕೋಲ್ಕತ್ತದಲ್ಲಿ ₹103.94, ಚೆನ್ನೈನಲ್ಲಿ ₹100.86 ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹106.83 ಆಗಿದೆ. ದೇಶದ ಇಪ್ಪತ್ತಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್ ದರ ₹100ಕ್ಕಿಂತಲೂ ಹೆಚ್ಚಿದೆ.
ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಹೆಚ್ಚಿನ ದರವಿದೆ. ದೇಶದಲ್ಲೇ ಅತಿ ಹೆಚ್ಚು ಪೆಟ್ರೋಲ್ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಅಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹114.92 ಇದೆ.
ಇನ್ನು ಡಿಸೇಲ್ ದರವು ಏರಿಕೆಯಲ್ಲೇ ಇದ್ದೂ ಇನ್ನು ಕೆಲವೇ ದಿನಗಳಲ್ಲಿ ಡಿಸೇಲ್ ದರ 100 ಗಡಿ ದಾಟಲಿದೆ.