KARNATAKA
ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ: ಆದೇಶ ಹಿಂಪಡೆದ ಸರ್ಕಾರ
ಬೆಂಗಳೂರು, ಜುಲೈ 16: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂಬ ಆದೇಶವನ್ನು ತಡರಾತ್ರಿ ಸರ್ಕಾರ ಹಿಂಪಡೆದಿದೆ.
ಸರ್ಕಾರಿ ಕಚೇರಿಗಳಲ್ಲಿ ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂದು ಸರ್ಕಾರ ಶುಕ್ರವಾರ ಆದೇಶಿಸಿತ್ತು. ಇದರಿಂದಾಗಿ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು, ಹೀಗಾಗಿ ಶುಕ್ರವಾರ ತಡರಾತ್ರಿ ಸರ್ಕಾರ ಆದೇಶ ಹಿಂಪಡೆದಿದೆ.
You must be logged in to post a comment Login