Connect with us

BANTWAL

ಫೋಟೋಗ್ರಾಫರ್ ದಿನೇಶ್ ಕೊಟ್ಟಿಂಜ ಮೇಲೆ ತಲ್ವಾರ್ ಹಲ್ಲೆ ಪ್ರಕರಣ – ಮೂವರು ಆರೆಸ್ಟ್

ಬಂಟ್ವಾಳ ಅಕ್ಟೋಬರ್ 29: ಫೋಟೋಗ್ರಾಫರ್ ದಿನೇಶ್ ಕೊಟ್ಟಿಂಜ ಅವರ ಮೇಲಿನ ಮಾರಕದಾಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಪುದ್ದೀನ್(22). ಮತ್ತೊಬ್ಬ ಆರೋಪಿ ಸವಾದ್‌ನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ದಿನೇಶ್ ಶೆಟ್ಟಿಯವರು ಫರಂಗಿಪೇಟೆಯ ಪೂಂಜಾ ಕಾಂಪ್ಲೆಕ್ಸ್ ನಲ್ಲಿರುವ ತೃಷಾ ಸ್ಟುಡಿಯೋ ಮಾಲಕರಾಗಿದ್ದರು. ಅಲ್ಲದೆ ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ತಲವಾರು ದಾಳಿಯಿಂದಾಗಿ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಆರೋಪಿಗಳು ಫೋಟೋ ತೆಗೆಸುವಂತೆ ಬಂದು ಇತ್ತೀಚಗೆ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿನೇಶ್ ರವರು ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದ ದ್ವೇಷದಿಂದ ಕೊಲೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಪ್ರಸನ್ನ ಹಾಗೂ ಸಿಬ್ಬಂದಿರವರು ಆರೋಪಿಗಳನ್ನು ಬಂಧಿಸಿದ್ದಾರೆ