Connect with us

    DAKSHINA KANNADA

    ಸುಳ್ಯ – ಪಿಕಪ್ ವಾಹನ ಚಾಲಕ ಹೃದಯಾಘಾತದಿಂದ ಸಾವು

    ಸುಳ್ಯ ಡಿಸೆಂಬರ್ 16 : ಪಿಕಪ್ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವೇಳೆಯೇ ಚಾಲಕನಿಗೆ ಹೃದಯಾಘಾತ ಉಂಟಾಗಿ ಸಾವನಪ್ಪಿದ ಘಟನೆ ಪೈಚಾರುನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.


    ಮೃತರನ್ನು ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು. ವಾಹನ ಸುಳ್ಯದ ಪೈಚಾರು ಸಮೀಪ ಬರುತ್ತಿದ್ದಂತೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಬಳಿಯಲ್ಲಿ ಕುಳಿತಿದ್ದ ವ್ಯಕ್ತಿಗೆ ವಿಷಯ ತಿಳಿಸಿದ್ದಾರೆ. ಅವರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply