LATEST NEWS
ಅಕ್ಟೋಬರ್ 2 ರಿಂದ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಬ್ಯಾನ್…!!
ಮಂಗಳೂರು ಸೆ.30: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದ್ದು, ಅಕ್ಟೋಬರ್ 2 ರಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ ಎಂದು ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬ್ಯಾನ್ ಬಗ್ಗೆ ಈಗಾಗಲೇ ಪ್ಲಾಸ್ಟಿಕ್ ಉತ್ಪಾದಕರ ಸಂಘಟನೆಗಳೊಂದಿಗೆ ಚರ್ಚೆ ನಡೆಸಲಾಗಿದೆ. ಅವರು ರಿಸೈಕಲ್ ಮಾಡೋದಕ್ಕೆ ಒಪ್ಪಿಕೊಂಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಿಕೆಯನ್ನು ಬ್ಯಾನ್ ಮಾಡಲಾಗಿದ್ದು, ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದಿದ್ದಾರೆ
ತ್ಯಾಜ್ಯ ವಿಲೇವಾರಿ ಮಾಡುವಾಗ ಘನತ್ಯಾಜ್ಯ ಮತ್ತು ದ್ರವತ್ಯಾಜ್ಯಗಳನ್ನು ಪ್ರತ್ಯೆಕಿಸಿ ನೀಡಬೇಕು. ಮಂಗಳೂರಿನ 60 ವಾರ್ಡ್ ಕಾರ್ಪೋರೇಟರ್ಗಳಿಗೂ ಈ ಬಗ್ಗೆ ಮಾಹಿತಿ, ಸೂಚನೆಯನ್ನು ನೀಡಲಾಗಿದೆ. ಪ್ರತೀ ಮನೆ, ಅಪಾರ್ಟ್‌ಮೆಂಟ್‌ಗಳು, ಅಂಗಡಿ ಮುಂಗಟ್ಟುಗಳು, ವ್ಯಾಪಾರಿ ಮಳಿಗೆಗಳಲ್ಲಿ ಕಡ್ಡಾಯವಾಗಿ ಪಾಲನೆಯಾಗಬೇಕು. ತಪ್ಪಿದ್ದಲ್ಲಿ ದಂಡ ಹಾಕಲಾಗುವುದು. ಇನ್ನು ತೆರೆದ ಪ್ರದೇಶಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗುತ್ತೆ. ಯಾರಾದರೂ ಕಸ ತ್ಯಾಜ್ಯ ವಿಲೇವಾರಿ ಮಾಡಿದ್ದು, ಕಂಡು ಬಂದಲ್ಲಿ ದಂಡ ವಿಧಿಸಲಾಗುತ್ತೆ ಎಂದು ಎಚ್ಚರಿಸಿದ್ದಾರೆ.