LATEST NEWS
ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಪ್ರಸ್ತಾವನೆ
ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಪ್ರಸ್ತಾವನೆ
ಬೆಂಗಳೂರು ಅಗಸ್ಟ್ 28: ಇಂದು ಬೆಂಗಳೂರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ದರ್ಪಣ್ ಜೈನ್ ಇವರ ಅಧ್ಯಕ್ಷತೆಯಲ್ಲಿ, ಮಂಗಳೂರಿನ ಗಂಜಿಮಠ ಕೈಗಾರಿಕಾ ವಲಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ಕುರಿತು ಸಭೆ ನಡೆಯಿತು.
ಈ ಸಭೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣದ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಚರ್ಚಿಸಲಾಯಿತು. ಒಂದು ತಿಂಗಳೊಳಗಾಗಿ ಪ್ರಸ್ತಾವನೆ ಸಲ್ಲಿಸಲು ನಿರ್ಣಯಿಸಲಾಗಿದ್ದು. ಕೇಂದ್ರ ಸರಕಾರ ಅನುಷ್ಠಾನಗೊಳಿಸಲಿರುವ ಈ ಯೋಜನೆಯಿಂದ ಸುಮಾರು 1000 ಕೋಟಿ ರೂ ವ್ಯವಹಾರ ನಡೆಯಲಿದೆ. ಈ ಪ್ಲಾಸ್ಟಿಕ್ ಪಾರ್ಕ್ ಯೋಜನೆಯಿಂದಾಗಿ 1000 ಜನರಿಗೆ ಉದ್ಯೋಗ ಲಭಿಸಲಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಕೈಗಾರಿಕೆಗಳು ಬರುವಂತೆ ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸುವಂತೆ ಆಯುಕ್ತರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಪ್ರತ್ಯೇಕವಾಗಿ ಕೋರಿದರು.
ಈ ಉನ್ನತ ಮಟ್ಟದ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಎಂ.ಆರ್.ಪಿ.ಎಲ್ ಆಡಳಿತ ನಿರ್ದೇಶಕರಾದ ವೆಂಕಟೇಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟೀ ನಿರ್ದೇಶಕರಾದ ಗೋಕುಲ್ ದಾಸ್ ನಾಯಕ್ ಹಾಗೂ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.