Connect with us

LATEST NEWS

ಕೊಲ್ಲೂರಿಗೆ ಬರಬೇಡಿ ಮನೆಯಲ್ಲೇ ಪ್ರಾರ್ಥಿಸಿ – ಕೊಲ್ಲೂರು ದೇವಸ್ಥಾನ ಮಂಡಳಿ

ಕೊಲ್ಲೂರಿಗೆ ಬರಬೇಡಿ ಮನೆಯಲ್ಲೇ ಪ್ರಾರ್ಥಿಸಿ – ಕೊಲ್ಲೂರು ದೇವಸ್ಥಾನ ಮಂಡಳಿ

ಉಡುಪಿ ಮಾ.17: ಕರ್ನಾಟಕದ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ರಥೋತ್ಸವಕ್ಕೂ ಕರೋನಾ ವೈರಸ್ ಭೀತಿ ಎದುರಾಗಿದೆ. ರಾಜ್ಯದಾದ್ಯಂತ ಕೊರೊನಾ ಹೈ ಅಲರ್ಟ್ ಇರುವುದರಿಂದ ಅದ್ಧೂರಿ ರಥೋತ್ಸವ ನಡೆಸದೇ ಇರಲು ದೇವಸ್ಥಾನ ತೀರ್ಮಾನಿಸಿದೆ.

ಪ್ರತಿವರ್ಷದಂತೆ ನಡೆಯುವ ಕೊಲ್ಲೂರು ಶ್ರೀ ಮೂಕಾಂಬಿಕೆಯ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಮಂದಿ ಸ್ಥಳೀಯ, ರಾಜ್ಯದ ಬೇರೆ ಬೇರೆ ಭಾಗದ ಮತ್ತು ಹೊರ ರಾಜ್ಯದ ಭಕ್ತರು ಸೇರುತ್ತಾರೆ. ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ ಇರುವುದರಿಂದ ಸರಳವಾಗಿ ದೇವಿಯ ಉತ್ಸವ ನಡೆಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿ ಸಭೆ ಮಾಡಿ ಜಿಲ್ಲಾಧಿಕಾರಿ ಜಗದೀಶ್ ಅವರ ಸೂಚನೆಗೆ ಒಪ್ಪಿದೆ. ಅದ್ಧೂರಿ ರಥೋತ್ಸವ ಬದಲು ದೇವರ ರಥಾರೋಹಣ ಮಾತ್ರ ಮಾಡಲು ನಿಶ್ಚಯಿಸಿದೆ. ರಥಾರೋಹಣ ವೇಳೆ ದೇವಸ್ಥಾನದ ಸಿಬ್ಬಂದಿ ಮತ್ತು ಅರ್ಚಕರು ಮಾತ್ರ ಪಾಲ್ಗೊಳ್ಳುವಂತೆ ವಿನಂತಿ ಮಾಡಿಕೊಂಡಿದೆ.

ಭಕ್ತರು ಮನೆಯಲ್ಲೇ ಇದ್ದು ಪ್ರಾರ್ಥನೆ ಮಾಡಿ ಸಮಸ್ಯೆಗಳು, ಕಂಟಕಗಳ ನಿವಾರಣೆಯಾದ ಮೇಲೆ ದೇವಸ್ಥಾನದಲ್ಲಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಿ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಇಒ ಅರವಿಂದ ಅಯ್ಯಪ್ಪ ಮನವಿ ಮಾಡಿದ್ದಾರೆ.

Facebook Comments

comments