KARNATAKA
ಕಾವೇರಿ ವಿಚಾರದಲ್ಲಿ ರಾಜಕಾರಣ ಬೇಡ, ರಾಜ್ಯದ ಜನತೆಯ ಹಿತ ಕಾಪಾಡಲು ಬದ್ದ – ಡಿ ಕೆ ಶಿವಕುಮಾರ್ ಅಭಯ..!
ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಬೇಡ.ರಾಜ್ಯದ ರೈತರು ಹಾಗೂ ಜನರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅಭಯ ನೀಡಿದ್ದಾರೆ.
ಮೈಸೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಬೇಡ.ರಾಜ್ಯದ ರೈತರು ಹಾಗೂ ಜನರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅಭಯ ನೀಡಿದ್ದಾರೆ.
ಬಿಳಿಗುಂಡ್ಲುವಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಆದ್ರೆ ನೀರು ಬಿಡುವ ಬಗ್ಗೆ ಯಾವುದೇ ತೀರ್ಮಾನಗಳು ಆಗಿಲ್ಲ. ಈ ವಿಚಾರದಲ್ಲಿ ನಾವು ತೀವ್ರವಾಗಿ ಹೋರಾಟ ಮಾಡಿದ್ದೇವೆ.
ನಮ್ಮ ತಾಂತ್ರಿಕ ಸಿಬ್ಬಂದಿ ಹಾಗೂ ಸಮಿತಿಯಲ್ಲಿ ಇರುವ ಅಧಿಕಾರಿಗಳು ಕಾವೇರಿ ನೀರಿನ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದಾರೆ.
ಈ ವಿಚಾರವಾಗಿ ಕೂಡಲೇ ನಾನು ಹಾಗೂ ಮುಖ್ಯಮಂತ್ರಿಗಳು ಕಾನೂನು ತಜ್ಞರ ಬಳಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಸೆ.1 ಶುಕ್ರವಾರದಂದು ಸುಪ್ರೀಂ ಕೋರ್ಟ್ ಕಾವೇರಿ ನೀರಿನ ವಿಚಾರವಾಗಿ ಮತ್ತೊಮ್ಮೆ ತೀರ್ಪು ನೀಡಲಿದೆ.
ಅಧಿಕಾರಿಗಳು ಕರ್ನಾಟಕದ ಹಿತಕ್ಕೆ ಧಕ್ಕೆಯಾಗದಂತೆ ರಾಜ್ಯದ ಹಿತ ಕಾಪಾಡುತ್ತೇವೆ ಎಂದು ಮಾತು ಕೊಟ್ಟಿದ್ದಾರೆ.
ನಾವು ಸಹ ಅಡ್ವೋಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಬಳಿ ಮಾತನಾಡುತ್ತೇವೆ.
ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದ್ದಾರೆ.