DAKSHINA KANNADA
ಗಮನಿಸಿ ಕರಾವಳಿ ಭಾಗದಲ್ಲಿ ಈ ವಾರ ಪೂರ್ತಿ ಅಬ್ಬರಿಸಲಿದ್ದಾನೆ ಮಳೆರಾಯ, ಹವಾಮಾನ ಇಲಾಖೆಯಿಂದ ಎಚ್ಚರಿಕೆ.!

ಬೆಂಗಳೂರು : ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಈ ವಾರ ಪೂರ್ತಿ ವರುಣ ಅಬ್ಬರಿಸಲಿದ್ದು ಜನ ಎಚ್ಚರಿಕೆಯಿಂದ ಇರಬೇಕೆಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದ್ದು ಮಲೆನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.

ನವೆಂಬರ್ 5 ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಗಾಳಿಯ ಜೊತೆಗೆ ವ್ಯಾಪಕ ಮಳೆಯಾಗಲಿದೆ ಆದ್ದರಿಂದ ಅಲ್ಲಿನ ಜಿಲ್ಲಾಡಳಿತಗಳಿಗೂ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ. ನವೆಂಬರ್ 2 ಮತ್ತು 3ನೇ ತಾರೀಕಿನಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಗಳಲ್ಲಿ ವರುಣ ಹೆಚ್ಚಿನ ಪ್ರಮಾಣದಲ್ಲಿ ಅಬ್ಬರಿಸಲಿದ್ದಾನೆ ಎಂದು ಸೂಚನೆ ಸಿಕ್ಕಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ ಮುಂತಾದೆಡೆ ಒಳ್ಳೆ ಮಳೆಯಾಗಲಿದೆ ಎಂದು ಅದು ಹೇಳಿದೆ.