ನಾನು ರಾಜಕೀಯಕ್ಕೆ ಬರಲ್ಲ ನರೇಂದ್ರ ಮೋದಿ ಒಬ್ಬರೇ ಸಾಕು – ಪ್ರಹ್ಲಾದ್ ಮೋದಿ

ಮಂಗಳೂರು ಫೆಬ್ರವರಿ 12: ಪ್ರಧಾನಮಂತ್ರಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಮಂಗಳೂರಿಗೆ ಆಗಮಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಲು ಇಂದು ಮಂಗಳೂರಿಗೆ ಆಗಮಿಸಿದ್ದಾರೆ.

ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರತಿ ಪಕ್ಷಗಳ ವಿರುದ್ದ ಹರಿಹಾಯ್ದಿದ್ದಾರೆ. ಒಬ್ಬ ಮೋದಿ ಬಂದೇ ವಿರೋಧಿಗಳ ಸ್ಥಿತಿ ಹೀಗಾಗಿದೆ, ಇನ್ನು ನಾನೂ ಬಂದರೆ ಏನಾಗಬೇಡ ಎಂದು ವ್ಯಂಗ್ಯವಾಡಿದ್ದಾರೆ.

ನಾನು ರಾಜಕೀಯಕ್ಕೆ ಬರುವುದಿಲ್ಲ, ನಮ್ಮ ಪರಿವಾರದಿಂದ ನರೇಂದ್ರ ಭಾಯ್ ಒಬ್ಬರೇ ಸಾಕು, ದೇಶವನ್ನು ಉನ್ನತಿಗೆ ಕೊಂಡೊಯ್ಯುವುದಕ್ಕೆ ಎಂದು ಹೇಳಿದರು.

ಮಮತಾ ಬ್ಯಾನರ್ಜಿಗೆ ನಾನೆಂದೂ ಬೆಂಬಲ ಕೊಟ್ಟಿಲ್ಲ, ಕೊಡುವುದೂ ಇಲ್ಲ, ನಮ್ಮ ಪರಿವಾರದ ನರೇಂದ್ರರನ್ನು ಬಿಡುವ ಪ್ರಶ್ನೆಯೇ ಬರುವುದಿಲ್ಲ, ಯಾರೋ ಮಾಧ್ಯಮದವರು ಹಿಂದೆ ನನ್ನ ಹೇಳಿಕೆ ತಿರುಚಿ ಬರೆದಿದ್ದಾರೆ. ಘಟಬಂಧನ ಬರಲಿ, ಪ್ರಿಯಾಂಕ ಗಾಂಧಿ ಬರಲಿ, ಪ್ರಿಯದರ್ಶಿನಿಯೇ ಬರಲಿ, 2019ರಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸಲಾಗದು, ಜನರ ಆಶೀರ್ವಾದ ಮೋದಿ ಮೇಲಿದೆ ಎಂದು ಹೇಳಿದರು.

VIDEO

Facebook Comments

comments