Connect with us

DAKSHINA KANNADA

ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಪ್ರಧಾನಿ ಸಂತಾಪ

ಬೆಂಗಳೂರು ಡಿಸೆಂಬರ್ 7: ನಿನ್ನೆ ನಿಧನರಾದ ಕರಾವಳಿ ಬಿಜೆಪಿ ಭೀಷ್ಮ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ (92) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ


ತಮ್ಮ ಟ್ವೀಟ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಮಭಟ್ ಅವರು ಕರ್ನಾಟಕದಲ್ಲಿ ಬಿಜೆಪಿ ಬಲಪಡಿಸಲು ಸಾಕಷ್ಟು ಶ್ರಮ ವಹಿಸಿದ್ದರು. ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ರಾಮಭಟ್ ಅವರಿಗೆ ಸದಾ ವಿಶೇಷ ಸ್ಥಾನ ಇದ್ದೇ ಇರುತ್ತದೆ’ ಎಂದಿದ್ದಾರೆ.


ವಯೋ ಸಹಜ ಅನಾರೋಗ್ಯದಿಂದಾಗಿ ರಾಮ ಭಟ್ ಉಡುಪಿ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟಿನ ಅವರ ಮನೆಯಲ್ಲಿ ಸೋಮವಾರ ನಿಧನರಾಗಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 7ಬಾರಿ ಸ್ಪರ್ಥಿಸಿದ್ದ ರಾಮ ಭಟ್ ಅವರು, 1977 ಮತ್ತು 1983ರಲ್ಲಿ ಗೆಲುವು ಸಾಧಿಸಿದ್ದರು. 1957ರಲ್ಲಿ ಮೊದಲ ಬಾರಿಗೆ ಜನಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 1985ರಲ್ಲಿ ಕೊನೆಯ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಜನಸಂಘ ಮತ್ತು ಆ ಬಳಿಕ ಬಿಜೆಪಿಯ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಮ ಭಟ್ ಅವರು ಹಲವು ನಾಯಕರನ್ನು ಬೆಳೆಸಿದ್ದರು.

Advertisement
Click to comment

You must be logged in to post a comment Login

Leave a Reply