LATEST NEWS
ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಧಾನಿ ನರೇಂದ್ರ ಮೊದಿ
ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಧಾನಿ ನರೇಂದ್ರ ಮೊದಿ
ಮಂಗಳೂರು ಅಕ್ಟೋಬರ್ 29: ಧರ್ಮಸ್ಥಳದ ಭೇಟಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಭವ್ಯ ಸ್ವಾಗತ ನೀಡಲಾಯಿತು.
ಮೋದಿ ಅವರನ್ನು ಕೇಂದ್ರ ಸಚಿವ ಅನಂತ್ ಕುಮಾರ್ ,ಡಿವಿ ಸದಾನಂದ ಗೌಡ ,ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯುಟಿ ಖಾದರ್ ,ಮಂಗಳೂರು ಮೇಯರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತಿರಿದ್ದರು.
ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತೆರಳಿದರು.
You must be logged in to post a comment Login