Connect with us

    KARNATAKA

    ಎಚ್ ಎಎಲ್ ನ ತೇಜಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾರಾಟ

    ಬೆಂಗಳೂರು ನವೆಂಬರ್ 25: ಪ್ರಧಾನಿ ಮೋದಿ ಎಚ್ಎಎಲ್ ನ ತೇಜಸ್ ಲಘು ಯುದ್ದ ವಿಮಾನದಲ್ಲಿ ಇಂದು ಹಾರಾಟ ನಡೆಸಿದ್ದಾರೆ. ಹೆಚ್ ಎಎಲ್ ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಅವರು ನಗರಕ್ಕೆ ಬಂದಿದ್ದರು. ತೇಜಸ್ ಯುದ್ಧ ವಿಮಾನ ಸೇರಿದಂತೆ ಹೆಚ್ ಎಎಲ್‌ನ ಉತ್ಪಾದನಾ ಸೌಲಭ್ಯವನ್ನು ಪ್ರಧಾನಿ ತಮ್ಮ ಭೇಟಿ ವೇಳೆ ಸುಮಾರು 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿದರು.


    ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು, ಇಂದು ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದೆ. ನಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಸ್ವಾವಲಂಬನೆಯ ಕ್ಷೇತ್ರದಲ್ಲಿ ಜಗತ್ತಿನ ಯಾವ ದೇಶಕ್ಕಿಂತ ನಾವು ಕಡಿಮೆಯಿಲ್ಲ ಎಂದು ನಾನು ಅಪಾರ ಹೆಮ್ಮೆಯಿಂದ ಹೇಳಬಲ್ಲೆ. ಭಾರತೀಯ ವಾಯುಪಡೆ, ಡಿಆರ್ ಡಿಒ ಮತ್ತು ಹೆಚ್ ಎಎಲ್ ಮತ್ತು ಎಲ್ಲಾ ಭಾರತೀಯರಿಗೆ ಮನದಾಳದ ಅಭಿನಂದನೆಗಳು.


    ತೇಜಸ್‌ ಯುದ್ಧ ವಿಮಾನದಲ್ಲಿ ಒಂದು ಪಯಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವ ವಿಸ್ಮಯಕಾರಿಯಾಗಿತ್ತು. ನಮ್ಮ ದೇಶದ ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ಉತ್ಪನ್ನಗಳ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಖಂಡಿತಾ ಹೆಚ್ಚಾಗಿದೆ. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನ್ನಲ್ಲಿ ಹೆಮ್ಮೆಯ ಭಾವ ಮತ್ತು ಆಶಾಭಾವನೆ ಹೆಚ್ಚಾಗಿದೆ ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *