ಎಪ್ರಿಲ್ 13 ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ?

ಉಡುಪಿ ಎಪ್ರಿಲ್ 2: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಎಪ್ರಿಲ್ 13 ರಂದು ಉಡುಪಿಯಲ್ಲಿ ಬೃಹತ್ ಬಿಜೆಪಿ ಚುನಾವಣಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವುದು ಬಹುತೇಕ ಖಚಿತವಾಗಿದೆ.

ಎರಡು ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು ಪ್ರತಿ ಭಾರಿ ದಕ್ಷಿಣಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಉಡುಪಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಮಾವೇಶ ಉಡುಪಿ ಚಿಕ್ಕಮಗಳೂರು, ದ.ಕ., ಶಿವಮೊಗ್ಗ, ಉ.ಕ. ಜಿಲ್ಲೆಯ ಆಂಶಿಕ ಭಾಗವನ್ನು ಒಳಗೊಂಡಿರುತ್ತದೆ.

ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಮಯವಿನ್ನೂ ನಿರ್ಧಾರವಾಗಿಲ್ಲ.
ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 13 ರಂದು ಚುನಾವಣೆ ಪ್ರಚಾರ ಮಾಡಿದರೆ. ಎಪ್ರಿಲ್ 15 ರಂದು ಚಿಕ್ಕಮಗಳೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ.