LATEST NEWS
ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ

ನವದೆಹಲಿ ಜೂನ್ 05: ಲೋಕಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಇದೀಗ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆ ಪತ್ರ ಸ್ವೀಕರಿಸಿದ ದ್ರೌಪದಿ ಮುರ್ಮು ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೂ ಪ್ರಧಾನಿಯಾಗಿ ಮುಂದುವರಿಯುವಂತೆ ಅವರು ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ನಿನ್ನೆ ಕೇಂದ್ರ ಸಚಿವ ಸಂಪುಟವು 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿತ್ತು. ಪ್ರಸ್ತುತ 17ನೇ ಲೋಕಸಭೆ ಅವಧಿ ಜೂನ್ 16ರಂದು ಕೊನೆಗೊಳ್ಳಲಿದೆ.
