Connect with us

    BELTHANGADI

    ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ, ಭರದ ಸಿದ್ದತೆ

    ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ, ಭರದ ಸಿದ್ದತೆ

    ಬೆಳ್ತಂಗಡಿ, ಅಕ್ಟೋಬರ್ 24: ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ.

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.

    ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ

    ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .

    ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ವರ್ಧಂತ್ಯುತ್ಸವ ಸಂದರ್ಭ ಕೂಡ ಇದೇ ಆಗಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಧರ್ಮಸ್ಥಳ ಭೇಟಿ ಅತೀ ಮಹತ್ವಪೂರ್ಣವಾಗಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply