LATEST NEWS
ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ ಕೇಂದ್ರ ಮೈದಾನದಲ್ಲಿ ಭರದ ಸಿದ್ದತೆ

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ ಕೇಂದ್ರ ಮೈದಾನದಲ್ಲಿ ಭರದ ಸಿದ್ದತೆ
ಮಂಗಳೂರು ಮೇ 03 : ಪ್ರಧಾನಿ ನರೇಂದ್ರ ಮೋದಿ ಮತ್ತೇ ಕರಾವಳಿಗೆ ಭೇಟಿ ನೀಡಲಿದ್ದಾರೆ. ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮೇ 5 ರಂದು ಮಂಗಳೂರಿಗೆ ಆಗಮಿಸಲಿರುವ ಮೋದಿ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶ ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೇ 5 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದ ಹಿನ್ನಲೆಯಲ್ಲಿ ಮಂಗಳೂರಿನ ಕೇಂದ್ರ ಮೈದಾನ ಸಿದ್ದತೆ ಭರದಿಂದ ಸಾಗುತ್ತಿದೆ. ಇಂದು ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.. ಈ ಸಂದರ್ಭದಲ್ಲಿ ಮೋನಪ್ಪ ಭಂಡರಿ, ರುಕ್ಮಯ್ಯ ಪೂಜಾರಿ, ಸುದರ್ಶನ್, ನಿತಿನ್ ಕುಮಾರ್, ಪ್ರಸಾದ್ ಮೊದಲಾದವರು ಹಾಜರಿದ್ದರು.

ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಪ್ರಚಾರದ ಬಳಿಕ ಚುನಾವಣೆಯ ಚಿತ್ರಣವೇ ಬದಲಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.