LATEST NEWS
ಪ್ರಧಾನಿ ಮೋದಿ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಪ್ರಧಾನಿ ಮೋದಿ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಜೈಪುರ ಫೆಬ್ರವರಿ 7: ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ.
ಈ ಘಟನೆ ಕೋಟಾ- ಚಿತ್ತೂರ್ ಹೆದ್ದಾರಿಯಿಂದ ಸುಮಾರು 55 ಕಿ.ಮೀ ದೂರದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅಪಾಯದಿಂದ ಪಾರಾಗಿದ್ದಾರೆ.
ಇನ್ನೊವಾ ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದು, ಇವರೆಲ್ಲರೂ ಗುಜರಾತ್ ನ ಬರನ್ ಎಂಬಲ್ಲಿನ ಅತ್ರು ಗೆ ಪ್ರವಾಸ ಬೆಳೆಸಿದ್ದರು, ಕಾರಿನಲ್ಲಿದ್ದವರೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಸಂಬಂಧಿಕರೆಂದು ತಿಳಿದು ಬಂದಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಜಯೇಂದ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತ ನಡೆದ ಕೂಡಲೇ ಜಶೋದಾ ಬೆನ್ ಅವರನ್ನು ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದು, ಆರೋಗ್ಯವಾಗಿದ್ದಾರೆ ಅಂತ ಚಿತ್ತೋರ್ ಗಢ್ ನ ಉಪವಿಭಾಗೀಯ ಮ್ಯಾಜಿಸ್ಟ್ರೇಟರ್ ಸುರೇಶ್ ಕಾರ್ತಿಕ್ ತಿಳಿಸಿದ್ದಾರೆ.
You must be logged in to post a comment Login