LATEST NEWS
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 65ರ ಕಾಮುಕ ಮದುಕ
ಉಡುಪಿ ಅಗಸ್ಟ್ 07: 65 ವರ್ಷದ ಮುದುಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಕಾಮುಕ ಮುದಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
ಉಡುಪಿ ಜಿಲ್ಲೆಯ ಅನಂತ ಸೇರಿಗಾರ್ ಎಂಬಾತ ಬಂಧಿತ ಆರೋಪಿ, ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಬಾಲಕಿಯು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾಳೆ. ಈ ಬಗ್ಗೆ ಮಕ್ಕಳ ಸಹಾಯವಾಣಿಯವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಿದರು.
ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.
You must be logged in to post a comment Login